ಚಂದ್ರಯಾನ ಯಶಸ್ವಿ, ರಾಜ್ಯಕ್ಕೆ ಮಹಿಳಾ ಸಿಎಂ: ಭವಿಷ್ಯ ನುಡಿದ ಕೋಡಿಶ್ರೀ

0
13

ಬೆಳಗಾವಿ: ಈ ಬಾರಿ ಚಂದ್ರಯಾನ-3 ಯಶಸ್ವಿಯಾಗಲಿದೆ ಎಂದು ಕೋಡಿಮಠದ ಡಾ. ಶಿವಾನಂದ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ.
ಬೆಳಗಾವಿಯಲ್ಲಿಂದು ಮಾತನಾಡಿರುವ ಅವರು, ಈ ಬಾರಿ ಚಂದ್ರಯಾನ 3 ಯಶಸ್ವಿಯಾಗಿ ಒಳ್ಳೆಯದಾಗಲಿದೆ ಎಂದ ಅವರು, ವಿಷಾನೀಲ ಬೀಸುವ ಪ್ರಸಂಗವೂ ಇದೆ. ಅದು ಎಲ್ಲ ಕಡೆಯೂ ವ್ಯಾಪಿಸಲಿದೆ. ಶ್ರಾವಣ ಮಾಸದ ಮಧ್ಯಂತರದಲ್ಲಿ ಜಾಗತಿಕ ಮಟ್ಟದಲ್ಲಿ ವಿಪರೀತ ಮಳೆಯಾಗಲಿದೆ. ವಿಪರೀತ ಮಳೆಯಿಂದ ಎರಡು ದೇಶಗಳು ನಾಶವಾಗಲಿವೆ. ಭಾರತದಲ್ಲಿ ಜಲಪ್ರಳಯ ಆಗುವ ಲಕ್ಷಣಗಳಿವೆ ಎಂದು ಆತಂಕಕಾರಿ ಭವಿಷ್ಯ ನುಡಿದಿದ್ದಾರೆ.
ರಾಜ್ಯಕ್ಕೆ ಮಹಿಳಾ ಮುಖ್ಯಮಂತ್ರಿ ಆಗುವ ಯೋಗ ಇದೆಯೇ? ಎಂಬ ಪ್ರಶ್ನೆಗೆ ಉತ್ತರಿಸಿರುವ ಕೋಡಿಶ್ರೀ, ಇವರದ್ದು ಮುಗಿಲಿ, ಎಲ್ಲವನ್ನೂ ಕಿತ್ತುಕೊಳ್ಳುತ್ತಿದ್ದಾರೆ. ಒಮ್ಮೆ ಮಹಿಳೆಯರಿಗೆ ಸಿಎಂ ಆಗುವ ಯೋಗ ಬರಲಿದೆ, ಅವರಿಗೂ ಅವಕಾಶ ಸಿಗಲಿ. ಹಣದ ಹಿಂದೆ ಮನುಷ್ಯ ಹೋಗದೇ ದೈವದ ಹಿಂದೆ ಹೋಗಬೇಕು ಎಂದು ಸ್ವಾಮೀಜಿ ಸಲಹೆ ನೀಡಿದರು.

Previous articleರೌಡಿಶೀಟರ್‌ ಬಾಲರಾಜ ಗಡಿಪಾರು
Next articleನಾಗ ಪಂಚಮಿ: ಗ್ರಾಮೀಣ ಸ್ಪರ್ಧೆ ಇಂದಿಗೂ ಜೀವಂತ