ಚಿಕ್ಕಮಗಳೂರು: ಅಂಗನವಾಡಿ-ಶಾಲೆಗಳಿಗೆ ರಜೆ

0
31

ಚಿಕ್ಕಮಗಳೂರು: ಜಿಲ್ಲೆಯ ಮಲೆನಾಡು ಭಾಗದಲ್ಲಿ ನಿರಂತರವಾಗಿ ಸುರಿಯುತ್ತಿರುವ ಧಾರಾಕಾರ ಮಳೆ ಹಿನ್ನೆಲೆಯಲ್ಲಿ ಮಲೆನಾಡು ಭಾಗದ ಆರು ತಾಲೂಕುಗಳ ಅಂಗನವಾಡಿ ಕೇಂದ್ರಗಳು ಹಾಗೂ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ಘೋಷಣೆ ಮಾಡಿ ಡಿಸಿ ಮೀನಾ ನಾಗರಾಜ್ ಆದೇಶ ಹೊರಡಿಸಿದ್ದಾರೆ.
ಜಿಲ್ಲೆಯ ಚಿಕ್ಕಮಗಳೂರು, ಮೂಡಿಗೆರೆ, ಕಳಸ, ಶೃಂಗೇರಿ, ಕೊಪ್ಪ ಹಾಗೂ ಎನ್.ಆರ್.ಪುರ ತಾಲೂಕುಗಳ ಶಿಶುಪಾಲನಾ ಕೇಂದ್ರ, ಅಂಗನವಾಡಿ, ಪ್ರಾಥಮಿಕ ಹಾಗೂ ಫ್ರೌಢ ಶಾಲೆಗಳಿಗೆ ರಜೆ ಘೋಷಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಿದ್ದಾರೆ.

Previous articleದೆವ್ವ ಬಿಡಿಸಲು 17 ಲಕ್ಷ ಕಳೆದುಕೊಂಡ ಮಹಾತಾಯಿ!
Next articleಪ್ರೀತಿಸಿ ಮದುವೆಯಾದ ಯುವತಿ ಹೊತ್ತೊಯ್ದ ಪೋಷಕರು