ಚಿತ್ರಕಲಾ ಪರಿಷತ್ತಿಗೆ 50 ಲಕ್ಷ ರೂ.ಅನುದಾನ

0
31

ಬೆಂಗಳೂರು: ಎಲ್ಲಾ ಜಿಲ್ಲೆಗಳಲ್ಲಿ ವಸ್ತು ಸಂಗ್ರಹಾಲಯ ಸ್ಥಾಪನೆ ಹಾಗೂ ಆರ್ಟ್ ಗ್ಯಾಲರಿ ಸ್ಥಾಪಿಸಲು ರಾಜ್ಯ ಸರ್ಕಾರ ಎಲ್ಲಾ ರೀತಿಯ ಸಹಾಯ ಮಾಡಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಕರ್ನಾಟಕ ಚಿತ್ರಕಲಾ ಪರಿಷತ್ ಆಯೋಜಿಸಿರುವ 21ನೇ ಚಿತ್ರ ಸಂತೆಯನ್ನು ಉದ್ಘಾಟಿಸಿ ಮಾತನಾಡಿರುವ ಅವರು ಚಿತ್ರಕಲೆಯ ಅಭಿವೃದ್ಧಿಗೆ ನಮ್ಮ ಸರ್ಕಾರ ಬದ್ಧವಾಗಿದೆ. ಈ ಬಾರಿ 50 ಲಕ್ಷ ರೂ.ಗಳ ಅನುದಾನವನ್ನು ಪರಿಷತ್ತಿಗೆ ಒದಗಿಸಲಾಗುವುದು. ಎಲ್ಲಾ ಜಿಲ್ಲೆಗಳಲ್ಲಿ ವಸ್ತು ಸಂಗ್ರಹಾಲಯ ಸ್ಥಾಪನೆ ಹಾಗೂ ಆರ್ಟ್ ಗ್ಯಾಲರಿ ಸ್ಥಾಪಿಸಲು ರಾಜ್ಯ ಸರ್ಕಾರ ಎಲ್ಲಾ ರೀತಿಯ ಸಹಾಯ ಮಾಡಲಿದೆ. 2003 ರಿಂದ ಇಂದಿನವರೆಗೆ ಚಿತ್ರಸಂತೆ ಆಚರಣೆಯಾಗುತ್ತಿದೆ. ಈ ವರ್ಷ 21ನೇ ಚಿತ್ರಸಂತೆ ನಡೆದಿದೆ. ಹಿಂದೆ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಪ್ರತಿ ವರ್ಷ ಚಿತ್ರಸಂತೆಯನ್ನು ಉದ್ಘಾಟಿಸಿದ್ದೇನೆ. ಪ್ರತಿ ವರ್ಷ 3 ರಿಂದ 4 ಲಕ್ಷ ಜನರು ಈ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಾರೆ. 22 ರಾಜ್ಯಗಳಿಂದ 1,600 ಕಲಾವಿದರು ಪಾಲ್ಗೊಳ್ಳುವುದು ಹೆಮ್ಮೆಯ ವಿಷಯ. ಈ ಬಾರಿ ಚಿತ್ರಸಂತೆಯನ್ನು ಬಾಹ್ಯಾಕಾಶ ವಿಜ್ಞಾನಿಗಳಿಗೆ ಸಮರ್ಪಣೆಯಾಗಿರುವುದು ಅವರಿಗೆ ಸಲ್ಲಿಸಿರುವ ವಿಶೇಷ ಗೌರವವಾಗಿದೆ ಎಂದರು.

Previous articleಬೆಳಗಾವಿಯಲ್ಲಿ ನೈತಿಕ ಪೊಲೀಸ್ ಗಿರಿ: ಗೂಂಡಾಗಳ ಬಂಧನಕ್ಕೆ ಈಶ್ವರಪ್ಪ ಆಗ್ರಹ
Next articleಗ್ರಾಮಕ್ಕೆ ಬಂದಾಗ ನನ್ನ ಬಾಲ್ಯದ ನೆನಪಾಗುತ್ತದೆ