ಚಿತ್ರದುರ್ಗ ಮುರುಘಾಮಠ: ಸರ್ಕಾರದ ಆಡಳಿತಾಧಿಕಾರಿ ನೇಮಕ ರದ್ದು

0
14
ಹೈ ಕೋರ್ಟ್

ಚಿತ್ರದುರ್ಗ: ಚಿತ್ರದುರ್ಗದ ಮುರಘಾ ಮಠಕ್ಕೆ ಆಡಳಿತಾಧಿಕಾರಿ ನೇಮಕ ಮಾಡಿದ್ದ ಆದೇಶವನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿದೆ. ನಿವೃತ್ತ ಐಎಎಸ್ ಅಧಿಕಾರಿ ಪಿ. ಎಸ್. ವಸ್ತ್ರದ ಅವರನ್ನು ಆಡಳಿತಾಧಿಕಾರಿಯನ್ನಾಗಿ ನೇಮಕ ಮಾಡಿತ್ತು. ರಾಜ್ಯ ಸರ್ಕಾರದ ಈ ಕ್ರಮ ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಕೆ ಮಾಡಲಾಗಿತ್ತು. ಸೋಮವಾರ ಕರ್ನಾಟಕ ಹೈಕೋರ್ಟ್‌ನ ನ್ಯಾಯಮೂರ್ತಿ ಎಸ್. ಕೃಷ್ಣ ದೀಕ್ಷಿತ್ ಅವರಿದ್ದ ಏಕಸದಸ್ಯಪೀಠ ಈ ಕುರಿತು ಆದೇಶ ಹೊರಡಿಸಿದೆ. ಆಡಳಿತಾಧಿಕಾರಿ ನೇಮಕ ರದ್ದುಗೊಳಿಸಿದೆ. ಕರ್ನಾಟಕ ಸರ್ಕಾರ 2022ರ ಡಿಸೆಂಬರ್ 13ರಂದು ಆಡಳಿತಾಧಿಕಾರಿ ನೇಮಕ ಮಾಡಿ ಆದೇಶ ಹೊರಡಿಸಿತ್ತು.

Previous articleಪ್ಲೇಆಫ್​ನಿಂದ ಹೊರಬಿದ್ದ ಆರ್​ಸಿಬಿ
Next articleವಿಧಾನಸಭೆ ಅಧಿವೇಶನ ಆರಂಭ: ನೂತನ ಶಾಸಕರ ಪ್ರಮಾಣವಚನ ಸ್ವೀಕಾರ