ಜನತೆಗೆ ಧನ್ಯವಾದ ತಿಳಿಸಿದ ಮೋದಿ

0
16

ನವದೆಹಲಿ: ಎನ್‌ಡಿಎ ಮೇಲೆ ನಂಬಿಕೆ ಇಟ್ಟ, ಜನತಾ ಜನಾರ್ದನ್‌ನಿಗೆ ಪ್ರಧಾನಿ ನರೇಂದ್ರ ಮೋದಿ ಧನ್ಯವಾದ ತಿಳಿಸಿದ್ದಾರೆ.
ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿರುವ ಅವರು ಜನರು ಸತತ ಮೂರನೇ ಬಾರಿಗೆ ಎನ್‌ಡಿಎ ಮೇಲೆ ನಂಬಿಕೆ ಇಟ್ಟಿದ್ದಾರೆ! ಇದು ಭಾರತದ ಇತಿಹಾಸದಲ್ಲಿ ಒಂದು ಐತಿಹಾಸಿಕ ಸಾಧನೆಯಾಗಿದೆ.
ಈ ಪ್ರೀತಿಗಾಗಿ ನಾನು ಜನತಾ ಜನಾರ್ದನ್ ಅವರಿಗೆ ನಮಸ್ಕರಿಸುತ್ತೇನೆ ಮತ್ತು ಜನರ ಆಶೋತ್ತರಗಳನ್ನು ಈಡೇರಿಸಲು ಕಳೆದ ದಶಕದಲ್ಲಿ ಮಾಡಿದ ಉತ್ತಮ ಕೆಲಸವನ್ನು ನಾವು ಮುಂದುವರಿಸುತ್ತೇವೆ ಎಂದು ಅವರಿಗೆ ಭರವಸೆ ನೀಡುತ್ತೇನೆ ಎಂದಿದ್ದಾರೆ.

Previous articleಪ್ರಧಾನಿ ಮೋದಿ ವಿರುದ್ಧ ಜನಾದೇಶ
Next articleಪ್ರಿಯಾಂಕಾ ಗೆಲುವಿನ ಸಂಭ್ರಮದಲ್ಲಿ ʼಪಾಕಿಸ್ತಾ‌ನ ಜಿಂದಾಬಾದ್..!ʼ