ಜನತೆಗೆ ಬ್ಲ್ಯಾಕ್ ಮೇಲ್: ಚುನಾವಣಾ ಆಯೋಗಕ್ಕೆ ದೂರು

0
7

ಬೆಂಗಳೂರು: ಕಾಂಗ್ರೆಸ್‌ ಸರಕಾರ ಚುನಾವಣೆಗೆ ಮೊದಲೇ ಜನತೆಗೆ ಬ್ಲ್ಯಾಕ್ ಮೇಲ್ ಮಾಡುತ್ತಿದೆ ಎಂದು ನಿಖಿಲ್ ಕುಮಾರಸ್ವಾಮಿ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿರುವ ಅವರು ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಸೋತರೆ ಈಗಾಗಲೇ ಜಾರಿ ಮಾಡಿರುವ ಐದು ಗ್ಯಾರೆಂಟಿಗಳು ರದ್ದಾಗುತ್ತವೆ ಎಂದು ಚುನಾವಣೆಗೆ ಮೊದಲೇ ಜನತೆಗೆ ಬ್ಲ್ಯಾಕ್ ಮೇಲ್ ಮಾಡಿರುವ ಮಾಗಡಿ ವಿಧಾನಸಭೆ ಕ್ಷೇತ್ರದ ಶಾಸಕರಾದ ಹೆಚ್.ಸಿ.ಬಾಲಕೃಷ್ಣ ಅವರ ವಿರುದ್ಧ ಚುನಾವಣಾ ಆಯೋಗಕ್ಕೆ ಕರ್ನಾಟಕ ಪ್ರದೇಶ ಜನತಾದಳ (ಜಾತ್ಯತೀತ) ವತಿಯಿಂದ ದೂರು ನೀಡಲಾಯಿತು, ಶಾಸಕ ಬಾಲಕೃಷ್ಣ ಅವರ ಶಾಸಕತ್ವವನ್ನು ರದ್ದು ಮಾಡಬೇಕು ಹಾಗೂ ಕಾಂಗ್ರೆಸ್ ಪಕ್ಷದ ಮಾನ್ಯತೆಯನ್ನೂ ರದ್ದುಪಡಿಸಬೇಕು ಎಂದು ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ಅವರಿಗೆ ಮನವಿ ಸಲ್ಲಿಸಲಾಯಿತು ಎಂದಿದ್ದಾರೆ.

Previous articleಬಾಲಿವುಡ್‌ ಬೆಡಗಿ ಪೂನಮ್‌ ಪಾಂಡೆ ಇನ್ನಿಲ್ಲ
Next articleಯುವಕನ ಕೊಲೆ: ಆರೋಪಿ ಬಂಧನ