ಹುಬ್ಬಳ್ಳಿ: ಕರ್ನಾಟಕದ ಮಹಿಳೆಯರಿಗೆ ರಾಜ್ಯದಲ್ಲಿ ಸರ್ಕಾರಿ ಬಸ್ಸಿನಲ್ಲಿ ಉಚಿತ ಪ್ರಯಾಣದ “ಶಕ್ತಿ” ಯೋಜನೆಯಲ್ಲಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಸ್ಸುಗಳಲ್ಲಿ ಜೂನ್ 11ರಿಂದ 25 ರವರೆಗೆ ಒಟ್ಟು 1.85 ಕೋಟಿ ಮಹಿಳೆಯರು ಪ್ರಯಾಣ ಮಾಡಿದ್ದು ಪ್ರಯಾಣದ ಟಿಕೆಟ್ ಮೌಲ್ಯ ರೂ. 46.76 ಕೋಟಿಗಳಾಗಿದೆ.
ಕರ್ನಾಟಕದ ಮಹಿಳೆಯರಿಗೆ ರಾಜ್ಯದಲ್ಲಿ ಸರ್ಕಾರಿ ಬಸ್ಸಿನಲ್ಲಿ ಉಚಿತ ಪ್ರಯಾಣದ “ಶಕ್ತಿ” ಯೋಜನೆಗೆ ನಿರೀಕ್ಷೆಗೂ ಮೀರಿದ ಭಾರಿ ಸ್ಪಂದನೆ ವ್ಯಕ್ತವಾಗಿದೆ. ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಸ್ಸುಗಳಲ್ಲಿ ಜೂನ್ 11ರಿಂದ 25 ರವರೆಗೆ ಒಟ್ಟು 1,84,69,377 ಮಹಿಳೆಯರು ಪ್ರಯಾಣ ಮಾಡಿದ್ದಾರೆ. ಪ್ರಯಾಣದ ಟಿಕೆಟ್ ಮೌಲ್ಯ ರೂ. 46,75,90,376 ಗಳಾಗಿದೆ. ಮಹಿಳೆಯರ ಜೊತೆಗೆ ಪುರುಷ ಪ್ರಯಾಣಿಕರ ಸಂಖ್ಯೆಯಲ್ಲೂ ಏರಿಕೆಯಾಗಿದ್ದು ಒಟ್ಟಾರೆ ಪ್ರಯಾಣಿಕರ ಸಂಖ್ಯೆಯಲ್ಲಿ ಹೆಚ್ಚಳವಾಗಿದೆ ಎಂದು ಪ್ರಕಟಣೆ ತಿಳಿಸಿದೆ.