ಜೂನ್ 15ರವರೆಗೆ ಹಿಂದಿನ ವರ್ಷದ ಬಸ್‌ಪಾಸ್‌ಗಳು ಹಾಗೂ ಶಾಲೆ- ಕಾಲೇಜುಗಳಲ್ಲಿ ಪ್ರವೇಶಾತಿ ಪಡೆದ ಶುಲ್ಕ ಪಾವತಿ ರಶೀದಿಯನ್ನು ತೋರಿಸಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್‌ಗಳಲ್ಲಿ ವಿದ್ಯಾರ್ಥಿಗಳು ಉಚಿತವಾಗಿ ಪ್ರಯಾಣ ಮಾಡಬಹುದು ಎಂದು ಕೆಎಸ್‌ಆರ್‌ಟಿಸಿ ಆದೇಶ ಹೊರಡಿಸಿದೆ. ಆನ್‌ಲೈನ್ ಮೂಲಕ ವಿದ್ಯಾರ್ಥಿ ಪಾಸ್‌ಗೆ ಅರ್ಜಿ ಸಲ್ಲಿಸುವುದಕ್ಕೆ ಮತ್ತು ಪಾಸ್ ಪಡೆಯಲು ಕಾಲಾವಕಾಶಬೇಕು. ಈಗಾಗಲೇ ಶೈಕ್ಷಣಿಕ ತರಗತಿ ಶುರುವಾಗಿರುವ ಕಾರಣ, ವಿದ್ಯಾರ್ಥಿಗಳಿಗೆ ಅನಾನುಕೂಲ ಆಗದಂತೆ ನೋಡಿಕೊಳ್ಳುವ ಸಲುವಾಗಿ ಉಚಿತ/ ರಿಯಾಯಿತಿ ಬಸ್ ಪಾಸ್ ಮೂಲಕ ಬಸ್ ಪ್ರಯಾಣಕ್ಕೆ ಅವಕಾಶ ವಿಸ್ತರಿಸಲಾಗಿದೆ ಎಂದು ಸುತ್ತೋಲೆ ಮೂಲಕ ತಿಳಿಸಿದೆ.