ಡಿಕೆಶಿ ಜೈಲಿಗೆ ಹೋಗೋದು ನಿಶ್ಚಿತ

0
6
ಈಶ್ವರಪ್ಪ

ಹಾವೇರಿ: ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಮೇಲೆ ಇರುವ ಸಿಬಿಐ ಕೇಸ್ ವಾಪಸ್ ಪಡೆಯಲು ರಾಜ್ಯ ಸರ್ಕಾರಕ್ಕೆ ಯಾವುದೇ ಅಧಿಕಾರ ಇಲ್ಲ. ಅವರು ಜೈಲಿಗೆ ಹೋಗುವುದು ನಿಶ್ಚಿತ ಎಂದು ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಹೇಳಿದರು.
ನಗರದಲ್ಲಿ ಗುರುವಾರ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು. ಡಿ.ಕೆ. ಶಿವಕುಮಾರ ಅವರ ಕೇಸ್ ಮುಂದುವರಿಸಲು ಅಭ್ಯಂತರ ಇಲ್ಲ ಎಂದು ಕೋರ್ಟ್ ಹೇಳಿದೆ. ಅವರ ಮೇಲಿನ ತನಿಖೆ ಶೇ. ೯೦ ಮುಗಿದಿದ್ದು, ಚಾರ್ಜ್ಶೀಟ್ ಮಾತ್ರ ಬಾಕಿ ಇದೆ. ಮೇಲ್ನೋಟಕ್ಕೆ ತುಂಬಾ ಸ್ಪಷ್ಟವಾಗಿ ಅಕ್ರಮ ಹಣ ಸಂಪಾದನೆ ಮಾಡಿರುವುದು ಬಹಿರಂಗ ಆಗಿದೆ. ನೂರಾರು ಕೋಟಿ ಹಣ ಸಿಕ್ಕಿರೋದು ಇಡೀ ರಾಜ್ಯದ ಜನ ನೋಡಿದ್ದಾರೆ ಎಂದರು.
ಅಧಿವೇಶನದ ಸಿದ್ಧತೆ ಕುರಿತು ಪ್ರತಿಕ್ರಿಯಿಸಿದ ಅವರು, ನಮಗೆ ಅಧಿವೇಶನದಲ್ಲಿ ಮಾತಾಡಲು ಹತ್ತಾರ ವಿಷಯಗಳಿವೆ. ಈ ಸರ್ಕಾರ ರಾಜ್ಯದ ಜನರ ಸಮಸ್ಯೆ ಕೇಳುತ್ತಿಲ್ಲ. ಇದು ಅಭಿವೃದ್ಧಿ ಶೂನ್ಯ ಸರ್ಕಾರ. ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಇವರು ಬಡಿದಾಡುತ್ತಿದ್ದಾರೆ, ಹೊರತು ರಾಜ್ಯದ ಅಭಿವೃದ್ಧಿ ಕಡೆ ಗಮನಹರಿಸುತ್ತಿಲ್ಲ. ಈ ಎಲ್ಲದರ ಬಗ್ಗೆ ಅಧಿವೇಶನಲ್ಲಿ ೬೫ ಜನ ನಮ್ಮ ಶಾಸಕರು ಚರ್ಚಿಸಲಿದ್ದಾರೆ ಎಂದು ತಿಳಿಸಿದರು.

Previous articleಜಾತಿ ಗಣತಿ ಬಿಡುಗಡೆಯಾದ್ರೆ ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ಚ್ಯುತಿ
Next articleಬಿಜೆಪಿಯವರ ಆರೋಪ ಪುಕ್ಕಟೆ ಪ್ರಚಾರದ ಸ್ಟಂಟ್