ಡೆತ್‌ನೋಟ್ ಬರೆದಿಟ್ಟು ವಿದ್ಯಾರ್ಥಿನಿ ಆತ್ಮಹತ್ಯೆ

0
38

ಬೆಂಗಳೂರು: ಡೆತ್ ನೋಟ್ ಬರೆದಿಟ್ಟು ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಶರಣಾದ ಘಟನೆ ಕಾಟನ್ ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಬಿಎಸ್‌ಸಿ ಕಂಪ್ಯೂಟರ್ ಸೈನ್ಸ್ ವಿದ್ಯಾರ್ಥಿನಿ ಆಯಿಶಾ ಬಿ.ಆರ್. ಎಂಬಾಕೆಯೇ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಇಲ್ಲಿನ ಬಿನ್ನಿ ಮಿಲ್ ಸಮೀಪದ ಪೊಲೀಸ್ ಕ್ವಾರ್ಟರ್ಸ್‌ನ ಏಳನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಡೆತ್‌ನೋಟ್‌ನಲ್ಲಿ “ನನ್ನ ಸಾವಿಗೆ ಕಾರಣ ಯಾರೂ ಅಲ್ಲ. ಜೀವನದ ಮೇಲೆ ಜಿಗುಪ್ಸೆ ಬಂದ ಕಾರಣದಿಂದ ನಾನೇ ಸ್ವತಃ ಈ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ. ನಾನು ನನ್ನ ಕುಟುಂಬಕ್ಕೆ ಹಾಗೂ ಭೀಮೇಶ್ ನಾಯಕ್ ಅವರ ಮೇಲೆ ನೀಡಿದ್ದ ಸುಳ್ಳು ಕೆಸ್‍ನಿಂದ ತುಂಬಾ ಪಶ್ಚಾತ್ತಾಪ ಪಟ್ಟುಕೊಳ್ಳುತ್ತಿದ್ದೇನೆ. ಭೀಮೇಶ್ ನಾಯಕ್ ತುಂಬಾ ಸೂಕ್ಷ್ಮ ಹಾಗೂ ಮುಗ್ಧ ವ್ಯಕ್ತಿ. ಅವರ ಹಾಗೂ ನನ್ನ ಮಧ್ಯೆ ಯಾವುದೇ ದೈಹಿಕ ಸಂಪರ್ಕವಿರುವುದಿಲ್ಲ. ನಾನು ಮಾಡಿದ ಈ ಸುಳ್ಳು ಕೇಸ್‍ನಿಂದ ಅವರ ತಂದೆ ಅನಾರೋಗ್ಯಕ್ಕೀಡಾಗಿದ್ದಾರೆ. ನನ್ನಿಂದ ಎರಡು ಕುಟುಂಬಗಳಿಗೂ ತುಂಬಾ ನೋವಾಗಿದೆ. ಈ ಪಶ್ಚಾತ್ತಾಪದಿಂದ ಹೊರಬರಲು ಆಗುತ್ತಿಲ್ಲ. ನಾನು ಮಾನಸಿಕವಾಗಿ ಕುಗ್ಗಿ ಹೋಗಿದ್ದೇನೆ. ಭೀಮೇಶ್ ನಾಯಕ್ ನನ್ನ ಆತ್ಮ ಸ್ನೇಹಿತ” ಎಂದು ಬರೆದಿದ್ದಾಳೆ.

Previous articleಅಸ್ಥಿರ ಸರ್ಕಾರದಿಂದ ಲಾಭಕ್ಕಿಂತ ನಷ್ಟವೇ ಹೆಚ್ಚು
Next articleಪ್ರಿಯಾಂಕಾ ಗಾಂಧಿ ಹೊಸ ಗ್ಯಾರಂಟಿ ಘೋಷಣೆ