ಶ್ರೀರಂಗಪಟ್ಟಣ: ಕೆಆರ್ ಎಸ್ ಅಣೆಕಟ್ಟೆ ಭರ್ತಿಯಾಗುವ ಮುನ್ನವೇ ತಮಿಳುನಾಡಿಗೆ ನೀರು ಹರಿಸುತ್ತಿರುವ ರಾಜ್ಯ ಸರ್ಕಾರದ ಕ್ರಮವನ್ನು ಖಂಡಿಸಿ ಶ್ರೀರಂಗಪಟ್ಟಣದಲ್ಲಿ ಮಂಡ್ಯ ರಕ್ಷಣಾ ವೇದಿಕೆ ಕಾರ್ಯಕರ್ತರು ಕಾವೇರಿ ನದಿಗಿಳಿದು ಪ್ರತಿಭಟನೆ ನಡೆಸಿದರು.
ಸಂಸ್ಥಾಪಕ ಅಧ್ಯಕ್ಷ ಶಂಕರ್ ಬಾಬು ನೇತೃತ್ವದಲ್ಲಿ ಇಲ್ಲಿನ ಅಂಬೇಡ್ಕರ್ ಭವನದ ಬಳಿಯ ಕಾವೇರಿ ನದಿಗಿಳಿದು ಕೂಡಲೇ ತಮಿಳುನಾಡಿಗೆ ಹರಿಸಲಾಗುತ್ತಿರುವ ನೀರನ್ನು ಸ್ಥಗಿತಗೊಳಿಸುತೆ ಆಗ್ರಹಿಸಿದರು.
ರಾಜ್ಯದಲ್ಲಿ ಜನ ಜಾನುವಾರುಗಳಿಗೆ ಹಾಗೂ ಬೆಳೆಗಳಿಗೆ ನೀರಿಲ್ಲದಂತಾಗಿದೆ. ಕೂಡಲೇ ಎಲ್ಲಾ ನಾಲೆಗಳಿಗೂ ನೀರು ಹರಿಸುವಂತೆ ಮರವೇ ಕಾರ್ಯಕರ್ತರು ಸರ್ಕಾರವನ್ನು ಒತ್ತಾಯಿಸಿದರು