ತಾಂತ್ರಿಕ ಸಮಸ್ಯೆ ಹಿನ್ನೆಲೆ ವಿಮಾನ ಸಂಚಾರದಲ್ಲಿ ವ್ಯತ್ಯಯ

0
16

ಮಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ರನ್ ವೇಯಲ್ಲಿ ಭಾನುವಾರ ಸಂಜೆ ತಾಂತ್ರಿಕ ಸಮಸ್ಯೆ ಹಿನ್ನೆಲೆಯಲ್ಲಿ ವಿಮಾನ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ. ವಿದ್ಯುತ್ ವೈಫಲ್ಯದಿಂದ ರನ್ ವೇ ನಲ್ಲಿ ತಾಂತ್ರಿಕ ಸಮಸ್ಯೆ ಉಂಟಾಗಿತ್ತು. ರನ್ ವೇ ದೀಪಗಳಲ್ಲಿ ತಾಂತ್ರಿಕ ಸಮಸ್ಯೆಯಿಂದ ಲೈಟ್ಸ್ ಆಫ್ ಆಗಿತ್ತು.
ಇದರಿಂದಾಗಿ ಮುಂಬೈನಿಂದ ಆಗಮಿಸಿದ ವಿಮಾನ ಲ್ಯಾಂಡ್ ಆಗಲಿಲ್ಲ. ಎಟಿಸಿ ಸೂಚನೆ ಮೇರೆಗೆ ಕೇರಳದ ಕಣ್ಣೂರಿಗೆ ವಾಪಾಸ್ ಕಳುಹಿಸಲಾಯಿತು. ಬಳಿಕ ಕಣ್ಣೂರು ವಿಮಾನ ನಿಲ್ದಾಣದಲ್ಲಿ ಮುಂಬೈ ವಿಮಾನ ಲ್ಯಾಂಡ್ ಆಯಿತು. ತಾಂತ್ರಿಕ ಸಮಸ್ಯೆ ಸರಿಪಡಿಸುವವರೆಗೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ವಿಮಾನಗಳ ಲ್ಯಾಂಡಿಂಗ್, ಟೇಕಾಫ್ ಸ್ಥಗಿತಗೊಳಿಸಲಾಗಿದೆ. ಮಂಗಳೂರಿನ ಆಗಮಿಸುವ ಮತ್ತು ನಿರ್ಗಮಿಸುವ ಎಲ್ಲ ವಿಮಾನಗಳ ಸಂಚಾರ ಸ್ಥಗಿತಗೊಂಡಿದೆ. ವಿಮಾನ ನಿಲ್ದಾಣ ಸಿಬ್ಬಂದಿಯಿಂದ ತಾಂತ್ರಿಕ ಸಮಸ್ಯೆ ಸರಿಪಡಿಸುವ ಕೆಲಸ ಆರಂಭವಾಗಿದೆ. ಕೆಲವೇ ಹೊತ್ತಿನಲ್ಲಿ ತಾಂತ್ರಿಕ ಸಮಸ್ಯೆ ಸರಿಪಡಿಸಿ ಮತ್ತೆ ವಿಮಾನ ಸಂಚಾರಕ್ಕೆ ಅನುವು ಮಾಡಿಕೊಡುವುದಾಗಿ ವಿಮಾನ ನಿಲ್ದಾಣ ಮೂಲಗಳು ತಿಳಿಸಿವೆ.

Previous articleರಸ್ತೆ ಅಪಘಾತ: ಚಿಕ್ಕ ಮಕ್ಕಳು ಸೇರಿ ಆರು ಜನರ ಸಾವು
Next articleರಸ್ತೆ ಅಪಘಾತ: ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ ಪರಿಹಾರ ಘೋಷಿಸಿದ ಸಿಎಂ