ತೆಲಂಗಾಣದಲ್ಲಿ ಕಾಂಗ್ರೆಸ್ ಸರಕಾರ ಶತಸಿದ್ಧ

0
14

ಧಾರವಾಡ: ತೆಲಂಗಾಣದಲ್ಲಿ ಕಾಂಗ್ರೆಸ್ ಪರವಾದ ವಾತಾವರಣ ಇದ್ದು, ಈ ಬಾರಿ ನಾವೇ ಸರಕಾರ ಮಾಡುತ್ತೇವೆ ಎಂದು ಮಾಜಿ ಕ್ರಿಕೆಟಿಗ, ಕಾಂಗ್ರೆಸ್ ಮುಖಂಡ ಮಹಮ್ಮದ್ ಅಜರುದ್ದೀನ್ ವಿಶ್ವಾಸ ವ್ಯಕ್ತಪಡಿಸಿದರು.
ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿ, ಕರ್ನಾಟಕ ರಾಜ್ಯದಲ್ಲಿ ಅನುಷ್ಠಾನಗೊಳಿಸಿರುವ ಗ್ಯಾರಂಟಿ ಯೋಜನೆ ಮತ್ತು ತೆಲಂಗಾಣ ಗ್ಯಾರಂಟಿ ಯೋಜನೆಗಳಲ್ಲಿ ವ್ಯತ್ಯಾಸವಿದೆ. ಎರಡಕ್ಕೂ ಹೋಲಿಕೆ ಮಾಡಲು ಆಗುವುದಿಲ್ಲ. ಕರ್ನಾಟಕ ರಾಜ್ಯದಲ್ಲಿ ಒಳ್ಳೆಯ ಯೋಜನೆಗಳನ್ನು ಕೊಟ್ಟಿದ್ದಾರೆ. ಅದಕ್ಕಾಗಿಯೇ ಇಲ್ಲಿಯ ಜನರು ಕಾಂಗ್ರೆಸ್‌ಗೆ ಅವಕಾಶ ಕೊಟ್ಟಿದ್ದಾರೆ. ಅದರ ಜೊತೆಗೆ ಅಭಿವೃದ್ಧಿ ಕಾರ್ಯಗಳೂ ಉತ್ತಮವಾಗಿ ನಡೆಯುತ್ತಿವೆ. ತೆಲಂಗಾಣದಲ್ಲಿಯೂ ಸಾಕಷ್ಟು ಅಭಿವೃದ್ಧಿ ಕೆಲಸ ಮಾಡಲಾಗುವುದು ಎಂದರು.
ಕ್ರಿಕೆಟ್‌ನಲ್ಲಿ ಭಾರತ ಗೆಲುವು
ದೇಶದಲ್ಲಿ ನಡೆಯುತ್ತಿರುವ ವಿಶ್ವಕಪ್ ಟೂರ್ನಿಯಲ್ಲಿ ಭಾರತ ತಂಡವೇ ಗೆಲುವು ಸಾಧಿಸಲಿದೆ. ಸದ್ಯ ಇರುವುದು ಒಳ್ಳೆಯ ತಂಡ. ತಂಡದ ನಾಯಕರೂ ಒಳ್ಳೆಯವರಾಗಿದ್ದಾರೆ. ಆದ್ದರಿಂದ ಭಾರತವೇ ವಿಶ್ವಕಪ್ ಗೆಲ್ಲುವ ವಿಶ್ವಾಸವಿದೆ ಎಂದು ಭರವಸೆ ವ್ಯಕ್ತಪಡಿಸಿದರು.

Previous articleಕಾರಾಗೃಹದ ಸಿಬ್ಬಂದಿ ಕೈದಿ ಮಧ್ಯೆ ಮಾರಾಮಾರಿ
Next articleಅಂತ್ಯಕ್ರಿಯೆಗೆ ಸಿಗದ ಜಾಗ