ತ್ರಿಪುರಾದಲ್ಲಿ ಬಿಜೆಪಿಗೆ ಮತ್ತೆ ಅಧಿಕಾರ

0
28
maniksaha

ತ್ರಿಪುರಾದಲ್ಲಿ ಸರಳ ಬಹುಮತದೊಂದಿಗೆ ಎರಡನೇ ಬಾರಿಗೆ ಬಿಜೆಪಿ ಅಧಿಕಾರಕ್ಕೇರಿದೆ. ಒಟ್ಟು 60 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಸರಳ ಬಹುಮತಕ್ಕೆ 31 ಸ್ಥಾನಗಳಲ್ಲಿ ಗೆಲುವು ಸಾಧಿಸಬೇಕಿತ್ತು. ಬಿಜೆಪಿ 33 ಕ್ಷೇತ್ರಗಳನ್ನು ಗೆಲ್ಲುವ ಮೂಲಕ ಅಧಿಕಾರವನ್ನು ಉಳಿಸಿಕೊಂಡಿದೆ. 2018ರ ಚುನಾವಣೆಗೆ ಹೋಲಿಸಿದರೆ, ಬಿಜೆಪಿ 10 ಸ್ಥಾನಗಳನ್ನು ಕಳೆದುಕೊಂಡಿದೆ.
ಹಾಲಿ ಮುಖ್ಯಮಂತ್ರಿ ಮಾಣಿಕ್‌ ಸಾಹಾ ಕಾಂಗ್ರೆಸ್‌ನ ಹಿರಿಯ ನಾಯಕ ಆಶೀಸ್‌ಕುಮಾರ್‌ ವಿರುದ್ಧ 1,257 ಮತಗಳ ಅಂತರದ ಗೆಲುವು ಸಾಧಿಸಿದ್ದು, ಎರಡನೇ ಬಾರಿಗೆ ಮುಖ್ಯಮಂತ್ರಿ ಆಗಲಿದ್ದಾರೆ.

Previous articleಕಾರ್ಯಕ್ರಮಕ್ಕೆ 500, ಅಂದ್ರೆ ಮತಕ್ಕೆ ಎಷ್ಟು?
Next articleಸಾಹಿತ್ಯ ಸಮ್ಮೇಳನದಲ್ಲಿ ಮೃತ ಕಲಾವಿದನಿಗೆ ಅವಕಾಶ..!