ದತ್ತಪೀಠದಲ್ಲಿ ಹರಕೆ ತೀರಿಸಿದ ಶ್ರೀರಾಮ ಸೇನೆ ಕಾರ್ಯಾಧ್ಯಕ್ಷ ಗಂಗಾಧರ ಕುಲಕರ್ಣಿ

0
31

ಚಿಕ್ಕಮಗಳೂರು: ಶ್ರೀಗುರು ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾದಲ್ಲಿ ನಿತ್ಯ ಪೂಜಾ ಕಾರ್ಯ ಕೈಗೊಳ್ಳಲು ರಾಜ್ಯ ಸರ್ಕಾರ ತಾತ್ಕಾಲಿಕವಾಗಿ ಹಿಂದೂ ಅರ್ಚಕರನ್ನು ನೇಮಕ ಮಾಡಿರುವ ಹಿನ್ನೆಲೆಯಲ್ಲಿ ಶ್ರೀರಾಮ ಸೇನೆ ಕಾರ್ಯಾಧ್ಯಕ್ಷ ಗಂಗಾಧರ ಕುಲಕರ್ಣಿ ಅವರು ಮುಡಿ ಅರ್ಪಿಸಿದರು.
ಶ್ರೀಗುರು ದತ್ತಾತ್ರೇಯ ಬಾಬಾ ಬುಡನ್‌ಸ್ವಾಮಿ ದರ್ಗಾದಲ್ಲಿ ಹಿಂದೂ ಅರ್ಚಕರ ನೇಮಕವಾಗುವರೆಗೂ ಮುಡಿ ಬಿಡುವುದಾಗಿ ಈ ಹಿಂದೆ ಗಂಗಾಧರ ಕುಲಕರ್ಣಿ ಹರಕೆ ಮಾಡಿ ಕೊಂಡಿದ್ದರು. ಈ ಹಿನ್ನೆಲೆಯಲ್ಲಿ ಇಂದು ಬೆಳಿಗ್ಗೆ ಶ್ರೀರಾಮ ಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಜೊತೆಗೆ ಗಿರಿಗೆ ತೆರಳಿದ ಅವರು, ಶ್ರೀಗುರು ದತ್ತಾತ್ರೇಯ ಪಾದುಕೆಗೆ ವಿಶೇಷ ಪೂಜೆ ಸಲ್ಲಿಸಿದರು.
ಆನಂತರ ದತ್ತಪಾದುಕೆ ಗುಹೆಯಿಂದ ಅನತಿ ದೂರದಲ್ಲಿರುವ ಹೋಮ-ಹವನ ನಡೆಸುವ ತಾತ್ಕಾಲಿಕ ಶೆಡ್ ಸಮೀಪ ಕೇಶಮುಂಡನ ಮಾಡಿಸಿಕೊಳ್ಳುವ ಮೂಲಕ ಇತಿಹಾಸದಲ್ಲಿ ಮೊದಲ ಬಾರಿಗೆ ಶ್ರೀಗುರು ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾದಲ್ಲಿ ಮುಡಿ ಅರ್ಪಿಸಿದರು. ಈ ಸಂದರ್ಭದಲ್ಲಿ ಶ್ರೀರಾಮ ಸೇನೆ ಜಿಲ್ಲಾಧ್ಯಕ್ಷ ರಂಜಿತ್ ಶೆಟ್ಟಿ, ದುರ್ಗಾ ಸೇನೆಯ ನವೀನಾ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

Previous articleಪ್ರತಿಭಟನಾ ಸ್ಥಳಕ್ಕೆ ಸಿಎಂ ಬರಲೇಬೇಕು: ಆಶಾ ಕಾರ್ಯಕರ್ತೆಯರ ಆಗ್ರಹ
Next articleಮಂತ್ರಾಲಯದ ಶ್ರೀರಾಯರ ಮಠದ ಹುಂಡಿಯಲ್ಲಿ 3.24 ಕೋಟಿ ಹಣ ಸಂಗ್ರಹ