ದರ್ಶನ ಹಿಂಡಲಗಾ ಜೈಲಿಗೆ..?

0
23

ಬೆಳಗಾವಿ: ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿ ದರ್ಶನ್‌ಗೆ ರಾಜ್ಯಾತಿಥ್ಯ ನೀಡಲಾಗುತ್ತಿದೆ ಎಂಬ ವಿವಾದದ ಹಿನ್ನೆಲೆಯಲ್ಲಿ ದರ್ಶನ್ ಆಂಡ್ ಗ್ಯಾಂಗ್‌ನ್ನು ಬೇರೆ ಜೈಲಿಗೆ ಶಿಫ್ಟ್ ಮಾಡಲು ಸಿಎಂ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.
ಜೈಲ್ ಡಿಜಿ ಮಾಲಿನಿ ಕೃಷ್ಣಮೂರ್ತಿ ಅವರು ಬೆಳಗಾವಿ ಹಿಂಡಲಗಾ ಜೈಲಿನ ಬಂದೋಬಸ್ತ್ ವ್ಯವಸ್ಥೆ ಕುರಿತು ಮಾಹಿತಿ ಸಂಗ್ರಹಿಸಿದ್ದಾರೆ. ಈಗಾಗಲೇ ಬೆಳಗಾವಿ ಹಿಂಡಲಗಾ ಜೈಲಿನಲ್ಲಿ ಭೂಗತ ಪಾತಕಿ ಬನ್ನಂಜೆ ರಾಜಾ, ದಂಡುಪಾಳ್ಯ ಗ್ಯಾಂಗ್, ವೀರಪ್ಪನ್ ಸಹಚರರು, ಸೈನೈಡ್ ಮಲ್ಲಿಕಾ, ಬಳ್ಳಾರಿ ನಾಗಾ ಸೇರಿ ಹಲವರು ಸೆರೆವಾಸ ಅನುಭವಿಸಿದ್ದಾರೆ. ಮರಣದಂಡನೆ ಶಿಕ್ಷೆಗೆ ಗುರಿಯಾದ ಕೈದಿಗಳಿಗೆ ಹಿಂಡಲಗಾ ಜೈಲಿನಲ್ಲಿಡಲಾಗುತ್ತಿದೆ.
ಹಿಂಡಲಗಾ ಜೈಲಿಗೆ ದರ್ಶನ್ ಅಥವಾ ಗ್ಯಾಂಗ್ ಶಿಫ್ಟ್‌ ಮಾಡಿದ್ರೇ ಆಗುವ ಸಾಧಕ-ಬಾಧಕ, ಜೈಲಿನಲ್ಲಿನ ಸೆಕ್ಯುರಿಟಿ ಕುರಿತು ಕೂಡ ಮಾಲಿನಿ ಕೃಷ್ಣಮೂರ್ತಿ ಅವರು ಮಾಹಿತಿ ಪಡೆದಿದ್ದಾರೆನ್ನಲಾಗಿದೆ.

Previous articleಡೋಲೋತ್ಸವದಲ್ಲಿ ಸಂಭ್ರಮಿಸಿದ ಕೃಷ್ಣ
Next articleಅನುಪಯುಕ್ತ ಬಸ್ ಭೋಜನಾ ಬಂಡಿಯಾಗಿ ಪರಿವರ್ತನೆ