ಬೆಂಗಳೂರು: ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾದ ನಟ ದರ್ಶನ್, ಪವಿತ್ರಾಗೌಡ ಸೇರಿ ಎಲ್ಲಾ 17 ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆ.12ರವರೆಗೆ ಅವಧಿ ವಿಸ್ತರಿಸಿ ಕೋರ್ಟ್ ಆದೇಶ ಹೊರಡಿಸಿದೆ.
ಬೆಂಗಳೂರಿನ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಮುಂದೆ ಆರೋಪಿಗಳನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯದ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ 60 ಡಿಜಿಟಲ್ ಸಾಕ್ಷ್ಯಗಳನ್ನೊಳಗೊಂಡ ಹಾರ್ಡ್ ಡಿಸ್ಕ್, ಪೆನ್ ಡ್ರೈವ್ ಅನ್ನು ಸರ್ಕಾರಿ ವಕೀಲ ಪ್ರಸನ್ನ ಕುಮಾರ್ ನ್ಯಾಯಾಲಯಕ್ಕೆ ಸಲ್ಲಿಕೆ ಮಾಡಿದರು. ಎಲ್ಲಾ ಆರೋಪಿಗಳ ನ್ಯಾಯಾಂಗ ಬಂಧನ ವಿಸ್ತರಣೆ ಆಗಿದ್ದು ಸೆಪ್ಟೆಂಬರ್ 12ರಂದು ಇವರು ಮತ್ತೆ ಕೋರ್ಟ್ ಎದುರು ಹಾಜರಾಗಬೇಕಾಗಿದೆ.