ದಾಭೋಲ್ಕರ್ ಹತ್ಯೆ ಪ್ರಕರಣ: ಹಂತಕರಿಗೆ ಜೀವಾವಧಿ ಶಿಕ್ಷೆ

0
22

ಬೆಂಗಳೂರು: 2013ರಲ್ಲಿ ನಡೆದ ಸಾಮಾಜಿಕ ಕಾರ್ಯಕರ್ತ, ವಿಚಾರವಾದಿ ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪುಣೆಯ ವಿಶೇಷ ನ್ಯಾಯಾಲಯ ಇಬ್ಬರು ಹಂತಕರಿಗೆ ಜೀವಾವಧಿ ಶಿಕ್ಷೆ ವಿಧಿಸಿದ್ದು, ಮೂವರು ಆರೋಪಿಗಳನ್ನು ಖುಲಾಸೆಗೊಳಿಸಿದೆ.
ಸಚಿನ್ ಅಂದುರೆ ಮತ್ತು ಶರದ್ ಕಲಾಸ್ಕರ್ ಅವರಿಗೆ ನ್ಯಾಯಾಲಯ ಜೀವಾವಧಿ ಶಿಕ್ಷೆ ಹಾಗೂ 5 ಲಕ್ಷ ರೂ. ದಂಡ ವಿಧಿಸಿದೆ. ಪ್ರಕರಣದ ಉಳಿದ ಮೂವರು ಆರೋಪಿಗಳಾದ ವೀರೇಂದ್ರಸಿನ್ಹ್ ತಾವ್ಡೆ, ಸಂಜೀವ್ ಪುನಾಲೇಕರ್ ಮತ್ತು ವಿಕ್ರಮ್ ಭಾವೆ ಅವರನ್ನು ಪ್ರಕರಣದಲ್ಲಿ ಖುಲಾಸೆಗೊಳಿಸಲಾಗಿದೆ.
ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬರೋಬ್ಬರಿ 11 ವರ್ಷಗಳ ಬಳಿಕ ಮಹತ್ವದ ತೀರ್ಪು ಹೊರಬಿದ್ದಿದೆ.

Previous articleದೇವೇಗೌಡರು CBI ಅನ್ನು ಚೋರ್‌ ಬಚಾವೋ ಸಂಸ್ಥೆ ಎಂದು ಕರೆದಿದ್ದರು
Next articleಕೇಜ್ರಿಗೆ ಬಿಗ್ ರಿಲೀಫ್ ನೀಡಿದ ಸುಪ್ರೀಂ ಕೋರ್ಟ್