ದೆಹಲಿ ವಿಧಾನಸಭೆ ಚುನಾವಣೆ: ಅತಿಶಿ ಭರ್ಜರಿ ಜಯಭೇರಿ

0
19

ಕಲ್ಕಾಜಿ ವಿಧಾನಸಭಾ ಕ್ಷೇತ್ರದಲ್ಲಿ ಬರೋಬ್ಬರಿ 32 ವರ್ಷಗಳಿಂದ ಬಿಜೆಪಿ ಅಧಿಕಾರಕ್ಕೆ ಬರಲು ಸಾಧ್ಯವಾಗಿಲ್ಲ

ನವದೆಹಲಿ: ಕಲ್ಕಾಜಿ ಕ್ಷೇತ್ರದಿಂದ ಸ್ಪರ್ಧೆ ಮಾಡಿದ್ದ ದೆಹಲಿ ಮುಖ್ಯಮಂತ್ರಿ ಅತಿಶಿ ಗೆಲುವು ಸಾಧಿಸಿದ್ದಾರೆ.
ದೆಹಲಿಯ ಮುಖ್ಯಮಂತ್ರಿಯಾಗಿರುವ ಅತಿಶಿ ಬಿಜೆಪಿ ಅಭ್ಯರ್ಥಿ ರಮೇಶ್ ಬಿಧುರಿ ಅವರನ್ನು ಸೋಲಿಸಿ ಗೆಲುವು ಕಂಡಿದ್ದಾರೆ. ಅತಿಶಿ ಸ್ಪರ್ಧಿಸಿದ್ದ ಕಲ್ಕಾಜಿ ವಿಧಾನಸಭಾ ಕ್ಷೇತ್ರದಲ್ಲಿ ಬರೋಬ್ಬರಿ 32 ವರ್ಷಗಳಿಂದ ಬಿಜೆಪಿ ಅಧಿಕಾರಕ್ಕೆ ಬರಲು ಸಾಧ್ಯವಾಗಿರಲಿಲ್ಲ. ಹೀಗಾಗಿ, ಈ ಕ್ಷೇತ್ರದ ಕಡೆಗೆ ಬಿಜೆಪಿ ಹೈಕಮಾಂಡ್ ಹೆಚ್ಚು ಗಮನ ಹರಿಸಿತ್ತು. ಕಲ್ಕಾಜಿ 2025ರ ವಿಧಾನಸಭಾ ಚುನಾವಣೆಯಲ್ಲಿ ಅತ್ಯಂತ ಪೈಪೋಟಿಯಿಂದ ಕೂಡಿದ್ದ ಮತ್ತು ಕುತೂಹಲ ಕೆರಳಿಸಿದ್ದ ಸ್ಥಾನಗಳಲ್ಲಿ ಒಂದಾಗಿತ್ತು. 1993ರ ಬಳಿಕ ಕಲ್ಕಾಜಿ ಕ್ಷೇತ್ರದಲ್ಲಿ ಒಮ್ಮೆಯೂ ಬಿಜೆಪಿ ಅಧಿಕಾರಕ್ಕೆ ಬರಲು ಸಾಧ್ಯವಾಗಿರಲಿಲ್ಲ. ದೆಹಲಿಯ ಪ್ರಸ್ತುತ ಮುಖ್ಯಮಂತ್ರಿ ಅತಿಶಿ ಮರ್ಲೇನಾ ಸಿಂಗ್ 3,500 ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿ ರಮೇಶ್ ಬಿಧುರಿ ವಿರುದ್ಧ ಗೆಲುವು ಸಾಧಿಸಿದ್ದಾರೆ. ಅಭ್ಯರ್ಥಿ ಅಲ್ಕಾ ಲಂಬಾ ಮೂರನೇ ಸ್ಥಾನ ಪಡೆದಿದ್ದಾರೆ.

Previous articleಹಗರಣಗಳಿಂದಲೇ ಅಪ್ ಕೊಚ್ಚಿ ಹೋಗಿದೆ…
Next articleಬಿಜೆಪಿ ಗೆಲುವು ದಾಖಲಿಸಿರುವುದು ರಾಷ್ಟ್ರಕ್ಕೆ ಒಂದು ಸಂದೇಶ