ಬೆಂಗಳೂರು: ದ್ವಿತೀಯ ಪಿಯು ಪರೀಕ್ಷೆ-2 ಫಲಿತಾಂಶ ಪ್ರಕಟವಾಗಿದೆ.
ಪರೀಕ್ಷೆ-2 ಏ.24 ರಿಂದ ಮೇ 8ರವರೆಗೆ ನಡೆದಿತ್ತು. ಪರೀಕ್ಷೆ-1ರಲ್ಲಿ 4.76 ಲಕ್ಷ ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದರು. ಎರಡೂ ಪರೀಕ್ಷೆಗಳಿಂದ ಉತ್ತೀರ್ಣರಾದವರ ಸಂಖ್ಯೆ 5.36 ಲಕ್ಷಕ್ಕೆ ಏರಿಕೆಯಾಗಿದೆ. ಒಟ್ಟಾರೆ ಫಲಿತಾಂಶ ಶೇ 77.96 ಆಗಿದೆ. ಎಂಜಿನಿಯರಿಂಗ್ ಸೇರಿ ವಿವಿಧ ವೃತ್ತಿ ಶಿಕ್ಷಣ ಕೋರ್ಸ್‌ಗಳ ಪ್ರವೇಶಕ್ಕೆ ನಡೆದಿದ್ದ ಸಿಇಟಿ ಪರೀಕ್ಷೆಯ ಅಭ್ಯರ್ಥಿಗಳಿಗೆ ಅನುಕೂಲ ಮಾಡಿಕೊಡಲು ಸಿಇಟಿ ಫಲಿತಾಂಶಕ್ಕೂ ಮೊದಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪರೀಕ್ಷೆ-2 ಫಲಿತಾಂಶ ಸಿದ್ಧಪಡಿಸಿದೆ. ಮೊದಲ ಮತ್ತು ಎರಡನೇ ಪರೀಕ್ಷೆಯಲ್ಲಿ ತೇರ್ಗಡೆಯಾಗದ ವಿದ್ಯಾರ್ಥಿಗಳಿಗೆ ಜೂನ್ 6ರಿಂದ 20ರವರೆಗೆ ಪರೀಕ್ಷೆ-3 ನಡೆಸಲಾಗುತ್ತದೆ. ಮೂರನೇ ಪರೀಕ್ಷೆಗೂ ಪರೀಕ್ಷಾ ಶುಲ್ಕ ಇರುವುದಿಲ್ಲ.
ದ್ವಿತೀಯ ಪಿಯು ಪರೀಕ್ಷೆ-2 ಫಲಿತಾಂಶವನ್ನು ಜಾಲತಾಣ https//karresults.nic.in ನಲ್ಲಿ ಪಡೆಯಬಹುದಾಗಿದೆ. https://karresults.nic.in/