ದ್ವಿತೀಯ ಪಿಯುಸಿ ಪರೀಕ್ಷೆ-3ಕ್ಕೆ ಯಾವುದೇ ಶುಲ್ಕವಿಲ್ಲ

0
30

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ- 2 ರಲ್ಲಿ ಉತ್ತೀರ್ಣರಾದ ಎಲ್ಲಾ 60,692 ವಿದ್ಯಾರ್ಥಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆವರು ಅಭಿನಂದನೆ ತಿಳಿಸಿದ್ದಾರೆ.
ದ್ವಿತೀಯ ಪಿಯು ಪರೀಕ್ಷೆ-2 ಏ.24 ರಿಂದ ಮೇ 8ರವರೆಗೆ ನಡೆದಿತ್ತು ಇಂದು ಫಲಿತಾಂಶ ಬಂದ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿದ್ಯಾರ್ಥಿಗಳಿಗೆ ಅಭಿನಂದನೆ ತಿಳಿಸಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿ ಫಲಿತಾಂಶದ ಸುಧಾರಣೆ ಬಯಸಿ ಮತ್ತೊಮ್ಮೆ ಪರೀಕ್ಷೆ ಎದುರಿಸಿದ್ದ 41,719 ವಿದ್ಯಾರ್ಥಿಗಳು ಕಳೆದ ಬಾರಿಗಿಂತ ಹೆಚ್ಚು ಅಂಕ ಪಡೆದು ಉತ್ತಮ ಸಾಧನೆ ತೋರಿದ್ದಾರೆ. ನಿಮ್ಮೆಲ್ಲರ ಮುಂದಿನ ಶೈಕ್ಷಣಿಕ ಬದುಕು ಉಜ್ವಲವಾಗಿರಲಿ ಎಂದು ಹಾರೈಸುತ್ತೇನೆ. ಹಿಂದಿನ ಎರಡೂ ಪರೀಕ್ಷೆಗಳಲ್ಲಿ ಉತ್ತೀರ್ಣರಾಗದ ವಿದ್ಯಾರ್ಥಿಗಳು ಆತಂಕ, ಹತಾಶೆಗೆ ಒಳಗಾಗುವ ಅಗತ್ಯವಿಲ್ಲ. ಯಾವುದೇ ಶುಲ್ಕವಿಲ್ಲದೆ ಪರೀಕ್ಷೆ -3 ಅನ್ನು ಬರೆದು ಉತ್ತೀರ್ಣರಾಗುವ ಅವಕಾಶವನ್ನು ಸರ್ಕಾರ ನಿಮಗೆ ಒದಗಿಸಿಕೊಟ್ಟಿದೆ. ಇದರ ಸದುಪಯೋಗ ಪಡೆದು ಭವಿಷ್ಯ ರೂಪಿಸಿಕೊಳ್ಳಿ ಎಂದಿದ್ದಾರೆ.

ದ್ವಿತೀಯ ಪಿಯು ಪರೀಕ್ಷೆ-2 ಫಲಿತಾಂಶವನ್ನು ಜಾಲತಾಣ https://karresults.nic.in/ ನಲ್ಲಿ ಪಡೆಯಬಹುದಾಗಿದೆ.

Previous articleದ್ವಿತೀಯ ಪಿಯು ಪರೀಕ್ಷೆ-2 ಫಲಿತಾಂಶ ಪ್ರಕಟ
Next articleಚಲಿಸುವ ರೈಲಿನಿಂದ ಬಿದ್ದು ಇಬ್ಬರು ಪ್ರಾಣಾಪಾಯದಿಂದ ಪಾರು