Home Advertisement
Home ತಾಜಾ ಸುದ್ದಿ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ: ಬಸ್ಸುಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ

ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ: ಬಸ್ಸುಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ

0
118

ಹುಬ್ಬಳ್ಳಿ : ಆಗಸ್ಟ್ 21ರಿಂದ ಸೆಪ್ಟಂಬರ್ 2 ರವರೆಗೆ ನಡೆಯಲಿರುವ ದ್ವಿತೀಯ ಪಿಯುಸಿ 2ನೇ ಪೂರಕ ಪರೀಕ್ಷೆ ಗಳಿಗೆ ಹಾಜರಾಗುವ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಪರೀಕ್ಷಾ ದಿನಗಳಂದು ಸಾರಿಗೆ ಸಂಸ್ಥೆಯ ಬಸ್ಸುಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಲಾಗಿದೆ.

ಪರೀಕ್ಷೆಗಳಿಗೆ ಹಾಜರಾಗುವ ವಿದ್ಯಾರ್ಥಿಗಳು ನಿರ್ವಾಹಕರಿಗೆ ದ್ವಿತೀಯ ಪಿ.ಯು.ಸಿ. 2ನೇ ಪೂರಕ ಪರೀಕ್ಷೆಯ ಪ್ರವೇಶ ಪತ್ರವನ್ನು ತೋರಿಸಿ ತಮ್ಮ ವಾಸ ಸ್ಥಳದಿಂದ ನಿಯೋಜಿತ ಪರೀಕ್ಷಾ ಕೇಂದ್ರಗಳಿಗೆ ಹೋಗಲು ಹಾಗೂ ಪರೀಕ್ಷೆ ಮುಗಿಸಿ ಹಿಂದಿರುಗಲು ಸಾರಿಗೆ ಸಂಸ್ಥೆಯ ಬಸ್ಸುಗಳಲ್ಲಿ ಉಚಿತ ಪ್ರಯಾಣ ಮಾಡಬಹುದಾಗಿದೆ. ನಗರ ಸಾರಿಗೆ, ಉಪನಗರ ಸಾರಿಗೆ ಸಾಮಾನ್ಯ ಹಾಗೂ ವೇಗದೂತ ಬಸ್ಸುಗಳಲ್ಲಿ ಈ ಸೌಲಭ್ಯವಿರುತ್ತದೆ ಎಂದು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಪ್ರಕಟಣೆಯಲ್ಲಿ ತಿಳಿಸಲಾಗಿದೆ.