Home Advertisement
Home ತಾಜಾ ಸುದ್ದಿ ಧಾರವಾಡ: ಜಿಲ್ಲೆಯಲ್ಲಿ ಬಿರುಸು ಪಡೆದ ನಾಮಪತ್ರ ಸಲ್ಲಿಕೆ

ಧಾರವಾಡ: ಜಿಲ್ಲೆಯಲ್ಲಿ ಬಿರುಸು ಪಡೆದ ನಾಮಪತ್ರ ಸಲ್ಲಿಕೆ

0
256
ಕಲಘಟಗಿ ಕ್ಷೇತ್ರಕ್ಕೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಮಾಜಿ ಸಚಿವ ಸಂತೋಷ ಲಾಡ್ ಸೋಮವಾರ ನಾಮಪತ್ರ ಸಲ್ಲಿಸಿದರು

ಧಾರವಾಡ : ನಾಮಪತ್ರ ಸಲ್ಲಿಕೆ ಅವಧಿ ಮುಕ್ತಾಯದ ಹಂತದ ದಿನಗಳು ಸಮೀಸುತ್ತಿದ್ದಂತೆಯೇ ವಿವಿಧ ರಾಜಕೀಯ ಪಕ್ಷಗಳ ಅಭ್ಯರ್ಥಿಗಳು, ಪಕ್ಷೇತರರು ಸೋಮವಾರ ನಾಮಪತ್ರ ಸಲ್ಲಿಕೆಗೆ ಮುಂದಾಗಿದ್ದಾರೆ.
ಕಲಘಟಗಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸಂತೋಷ ಲಾಡ್, ಧಾರವಾಡ ಪಶ್ಚಿಮ ಕ್ಷೇತ್ರದ ಆಮ್ ಆದ್ಮಿ ಪಕ್ಷದ ಅಭ್ಯರ್ಥಿ ಎಂ.ಅರವಿಂದ, ಕುಂದಗೋಳ ಕ್ಷೇತ್ರಕ್ಕೆ ಮಾಜಿ ಶಾಸಕ ಎಸ್.ಐ.ಚಿಕ್ಕನಗೌಡರ, ಹುಬ್ಬಳ್ಳಿ – ಧಾರವಾಡ ಪೂರ್ವ ಕ್ಷೇತ್ರಕ್ಕೆ ಹಾಲಿ ಶಾಸಕ ಪ್ರಸಾದ್ ಅಬ್ಬಯ್ಯ ನಾಮಪತ್ರ ಸಲ್ಲಿಸಿದರು.
ಬೆಳಿಗ್ಗೆ 11 ರಿಂದ ಮಧ್ಯಾಹ್ನ 3 ರವರೆಗೂ ನಾಮಪತ್ರ ಸಲ್ಲಿಕೆಗೆ ಸಮಯವಿದೆ. ಮಧ್ಯಾಹ್ನ 12.30 ರ ಹೊತ್ತಿಗೆ ನಾಲ್ಕು ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. 3 ಗಂಟೆ ಹೊತ್ತಿಗೆ ಮತ್ತಷ್ಟು ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ ಮಾಡುವ ನಿರೀಕ್ಷೆ ಇದೆ.