ಬೆಳಗಾವಿ: ಬೆಳಗಾವಿ – ಜಾಂಬೋಟಿ, ಚೋರ್ಲಾ ಮಾರ್ಗವಾಗಿ ಗೋವಾಕ್ಕೆ ಸಂಪರ್ಕಿಸುವ ಹೆದ್ದಾರಿ ಸೇತುವೆ ಕಾಮಗಾರಿ ನಡೆಯುತ್ತಿದ್ದು, ಸತತವಾಗಿ ಬಿಳುತ್ತಿರುವ ಮಳೆಗೆ ಏಕಾಏಕಿ ನೀರು ಹೆಚ್ಚಳ ಆಗಿದ್ದರಿಂದ ಮಣ್ಣಿನ ರಸ್ತೆ ಕೊಚ್ಚಿ ಹೋಗಿದ್ದರಿಂದ ಸಂಚಾರ ಸ್ಥಗಿತಗೊಂಡಿದೆ. ಇದರ ಪರಿಣಾಮ ಬೆಳಗಾವಿ- ಜಾಂಬೋಟಿ, ಚೋರ್ಲಾ ಮಾರ್ಗವಾಗಿ ಗೋವಾಕ್ಕೆ ಸಂಪರ್ಕಿಸುವ ಹೆದ್ದಾರಿ ಬಂದ್ ಆಗಿದೆ. ಹಳೆ ಸೇತುವೆ ಕೆಡವಿ ಹೊಸ ಸೇತುವೆ ನಿರ್ಮಾಣದ ಕಾಮಗಾರಿ ನಡೆಯುತ್ತಿದ್ದರಿಂದ ಮಣ್ಣಿನ ರಸ್ತೆ ನಿರ್ಮಿಸಿ ಸಂಚಾರಕ್ಕೆ ಅನುವು ಮಾಡಲಾಗಿತ್ತು ಆದರೆ ನದಿಯಲ್ಲಿ ನೀರಿನ ಹರಿವು ಹೆಚ್ಚಳ ಆಗಿರುವ ಹಿನ್ನೆಲೆಯಲ್ಲಿ ರಸ್ತೆ ಕೊಚ್ಚಿ ಹೋಗಿದ್ದು ಗೋವಾಕ್ಕೆ ಸಂಪರ್ಕಿಸುವ ಹೆದ್ದಾರಿ ಬಂದ್ ಆಗಿದೆ.