ನಕಲಿ ಲೋಕಾಯುಕ್ತ ಅಧಿಕಾರಿ ಬಂಧಿಸಿದ ಪೊಲೀಸರು

0
24

ವಿಜಯಪುರ: ಮಹಾರಾಷ್ಟ್ರ ಹಾಗೂ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಲೋಕಾಯುಕ್ತ ಅಧಿಕಾರಿ ಎಂದು ಹೇಳಿ ವಂಚಿಸುತ್ತಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಸದಲಗಾ ಮೂಲದ ೫೭ ವರ್ಷದ ಮುರಿಗೆಪ್ಪ ನಿಂಗಪ್ಪ ಕುಂಬಾರ ಬಂಧಿತ ಆರೋಪಿಯಾಗಿದ್ದು, ಆತನ ಮೇಲೆ ಬರೋಬ್ಬರಿ ೫೭ ಪ್ರಕರಣಗಳು ದಾಖಲಾಗಿವೆ.
ಆರೋಪಿ ಮುರಿಗೆಪ್ಪ ಲೋಕಾಯುಕ್ತ ಅಧಿಕಾರಿಯಂತೆ ನಟಿಸಿ ಅಧಿಕಾರಿಯನ್ನು ಬೆದರಿಸಿ ಹಣ ಕೀಳುವ ಪ್ರಯತ್ನದಲ್ಲಿ ತೊಡಗಿದ್ದ. ವಿಜಯಪುರದ ಕೆಬಿಜೆಎನ್‌ಎಲ್ ಉಪವಿಭಾಗದ ಅಧಿಕಾರಿ ಅಶೋಕ ಬಿರಾದಾರ ಅವರಿಗೆ ತಾನು ಲೋಕಾಯುಕ್ತ ಡಿವೈಎಸ್‌ಪಿ ಎಂದು ಹೇಳಿ ೭೦ ಸಾವಿರ ರೂ. ಹಣ ಪಡೆಯಲು ಪ್ರಯತ್ನಿಸಿದ್ದ. ಈ ಕುರಿತಂತೆ ಅಧಿಕಾರಿ ಮುದ್ದೇಬಿಹಾಳ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಈ ದೂರು ಆಧರಿಸಿ ತನಿಖೆಯಲ್ಲಿ ತೊಡಗಿದ್ದ ಪೊಲೀಸರು ಮಹಾರಾಷ್ಟ್ರದ ಶಿರೋಳ ಗ್ರಾಮದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಆರೋಪಿ ವಿರುದ್ಧ ಮಹಾರಾಷ್ಟ್ರ, ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮೋಸ, ವಂಚನೆ, ಸೈಬರ್ ಅಪರಾಧಗಳಿಗೆ ಸಂಬಂಧಿಸಿದಂತೆ ಒಟ್ಟು ೫೭ ಪ್ರಕರಣಗಳು ದಾಖಲಾಗಿವೆ ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕ ಲಕ್ಷ್ಮಣ ನಿಂಬರಗಿ ಮಾಹಿತಿ ನೀಡಿದ್ದಾರೆ.

Previous articleವಿಮಾನದಲ್ಲಿ ತಾಂತ್ರಿಕ ತೊಂದರೆ: ರಾತ್ರಿಯಿಡೀ ಲಾಂಜ್‌ನಲ್ಲಿಯೇ ಪ್ರಯಾಣಿಕರ ಪರದಾಟ
Next articleಗ್ರಾಮೀಣ ಪತ್ರಕರ್ತರಿಗೆ ಜಿಲ್ಲಾ ಬಸ್ ಪಾಸ್: ಆನ್‌ಲೈನ್ ಅರ್ಜಿ ಆಹ್ವಾನ