ನಕಲಿ ವೈದ್ಯಕೀಯ ವೃತ್ತಿ ತಡೆಗೆ ದಿಟ್ಟ ಹೆಜ್ಜೆ

0
18

ಬೆಂಗಳೂರು: ನಕಲಿ ವೈದ್ಯಕೀಯ ವೃತ್ತಿಯನ್ನು ಬೇರುಸಮೇತ ಕಿತ್ತೊಗೆಯಲು ಆರೋಗ್ಯ ಇಲಾಖೆಯು ಆದೇಶವನ್ನು ಹೊರಡಿಸಿದ್ದು ಇದರನ್ವಯ ಖಾಸಗಿ ಆಸ್ಪತ್ರೆಗಳು, ಕ್ಲಿನಿಕ್’ಗಳು ತಮ್ಮ KPME ನೋಂದಣಿ ಸಂಖ್ಯೆ, ಆಸ್ಪತ್ರೆಯ ಹೆಸರು ಮತ್ತು ಮಾಲೀಕರ ಹೆಸರನ್ನು ಕಟ್ಟಡದ ಮುಂಭಾಗದಲ್ಲಿ ಪ್ರದರ್ಶಿಸವುದು ಕಡ್ಡಾಯವಾಗಿದೆ. ಇಷ್ಟೇ ಅಲ್ಲದೆ, ಅಲೋಪತಿ ಆಸ್ಪತ್ರೆಗಳು ನೀಲಿ ಬಣ್ಣ ಮತ್ತು ಆಯುರ್ವೇದಿಕ್ ಆಸ್ಪತ್ರೆಗಳು ಹಸಿರು ಬಣ್ಣದ ಬೋರ್ಡ್ ಬಳಸುವ ಮೂಲಕ ಬಣ್ಣ ಸಂಹಿತೆಯನ್ನು ಕಡ್ಡಾಯವಾಗಿ ಅನುಸರಿಸಬೇಕು. ಖಾಸಗಿ ವೈದ್ಯಕೀಯ ಆಸ್ಪತ್ರೆಗಳು ಈ ನಿಯಮಗಳನ್ನು ಅನುಸರಿಸುವಲ್ಲಿ ವಿಫಲವಾದಲ್ಲಿ KPME ತಿದ್ದುಪಡಿ ಕಾಯಿದೆ 2017 ರ ಸೆಕ್ಷನ್ 19(5) ರ ಅನ್ವಯ ಕಠಿಣ ಕಾನೂನುಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದೆ.

Previous articleಹೆದ್ದಾರಿಯಲ್ಲೇ ಮಗುಚಿಬಿದ್ದ ಲಾರಿ
Next articleಮೋದಿ ಪ್ರಮಾಣ ವಚನ: ಪೇಜಾವರ ಶ್ರೀ ಭಾಗಿ