ನಟ ದರ್ಶನ್‌ & ಗ್ಯಾಂಗ್‌ ಮತ್ತೆ 5 ದಿನ ಪೊಲೀಸ್‌ ಕಸ್ಟಡಿಗೆ

0
10

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಮತ್ತು ಗ್ಯಾಂಗ್‌ನ್ನು ಮತ್ತೆ 5 ದಿನ ಪೊಲೀಸ್ ಕಸ್ಟಡಿಗೆ ನೀಡಿ ಆರ್ಥಿಕ ಅಪರಾಧಗಳ ವಿಶೇಷ ಕೋರ್ಟ್ ಆದೇಶ ಹೊರಡಿಸಿದೆ.
ಕಸ್ಟಡಿ ಅವಧಿ ಇಂದು ಮುಕ್ತಾಯವಾದ ಹಿನ್ನೆಲೆಯಲ್ಲಿ ಆರೋಪಿಗಳನ್ನು ಮೆಡಿಕಲ್ ಟೆಸ್ಟ್‌ಗೆ ಒಳಪಡಿಸಿರುವ ಪೊಲೀಸರು ಬಳಿಕ ನಟ ದರ್ಶನ್ ಸೇರಿದಂತೆ 14 ಆರೋಪಿಗಳನ್ನು ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರ ಠಾಣೆ ಪೊಲೀಸರು ಕೋರ್ಟ್‌ಗೆ ಹಾಜರುಪಡಿಸಿದ್ದರು.
ಈ ವೇಳೆ ಹೆಚ್ಚಿನ ಪೊಲೀಸ್ ತನಿಖೆಯ ಅಗತ್ಯವಿರುವ ಹಿನ್ನೆಲೆ ಆರೋಪಿಗಳನ್ನು ಇನ್ನಷ್ಟು ದಿನ ತಮ್ಮ ವಶಕ್ಕೆ ನೀಡುವಂತೆ ಪೊಲೀಸರು ಮನವಿ ಮಾಡಿದ್ದರು. ಈ ಹಿನ್ನೆಲೆ ಪ್ರಕರಣದಲ್ಲಿ ನಟ ದರ್ಶನ್ & ಗ್ಯಾಂಗ್‌ನ್ನು ಜೂನ್ 20ರವರೆಗೆ ಪೊಲೀಸ್ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ ಹೊರಡಿಸಿದೆ.

Previous articleಸವದತ್ತಿ ಯಲ್ಲಮ್ಮ ದೇವಿ ಮಂದಿರದ ಅಭಿವೃದ್ಧಿಗೆ ಕ್ರಮ
Next articleಮಹಿಳೆಯರನ್ನು ದೇಶ ಕಟ್ಟುವ ಕೆಲಸದಲ್ಲಿ ತೊಡಗಿಸಿಕೊಳ್ಳದಿದ್ದರೆ ದೇಶಕ್ಕೆ ನಷ್ಟ