ಬೆಂಗಳೂರು: ನಟ ದರ್ಶನ್ ಸೇರಿದಂತೆ 7 ಆರೋಪಿಗಳಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ.
ರೇಣುಕಾಸ್ವಾಮಿ ಪ್ರಕರಣಕ್ಕೆ ಸಂಬಂಧಪಟ್ಟಂತೆ ಎ1 ಆರೋಪಿ ಪವಿತ್ರಾಗೌಡ ಹಾಗೂ ಎ2 ಆರೋಪಿ ನಟ ದರ್ಶನ್ ಅವರಿಗೆ ಪೂರ್ಣಾವಧಿ ಜಾಮೀನು ಅನ್ನು ಹೈಕೋರ್ಟ್ ಮಂಜೂರು ಮಾಡಿದ್ದು. ರೇಣುಕಾಸ್ವಾಮಿ ಪ್ರಕರಣದಲ್ಲಿ ದರ್ಶನ್, ಪವಿತ್ರಾಗೌಡ, ಆರ್ ನಾಗರಾಜು, ಎಂ ಲಕ್ಷ್ಮಣ್, ಅನು ಕುಮಾರ್ ಅಲಿಯಾಸ್ ಅನು, ಜಗದೀಶ್ ಅಲಿಯಾಸ್ ಜಗ್ಗ, ಪ್ರದೋಷ್ ರಾವ್ ಒಟ್ಟು 7 ಆರೋಪಿಗಳಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಜೂ. 11ರಂದು ನಟ ದರ್ಶನ್ ಸೇರಿ ಹಲವರು ಬಂಧನಕ್ಕೊಳಗಾಗಿದ್ದರು.