ನಟ ‘ಪ್ರಜ್ವಲ್​ ದೇವರಾಜ್​ ಇನ್ನಿಲ್ಲ’: ಸುಳ್ಳು ಸುದ್ದಿ ಹಬ್ಬಿಸಿದ ಕಿಡಿಗೇಡಿಗಳು

0
20

ಬೆಂಗಳೂರು: ಕನ್ನಡ ಚಿತ್ರರಂಗದ ನಟ ಪ್ರಜ್ವಲ್‌ ದೇವರಾಜ್‌ ಇನ್ನಿಲ್ಲ ಎಂಬ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡತೊಡಗಿದೆ.
ಈ ಬಗ್ಗೆ ಸ್ವತಃ ಹಿರಿಯ ನಟ ದೇವರಾಜ್‌ ಮತ್ತವರ ಕುಟುಂಬ ಸ್ಪಷ್ಟನೆ ನೀಡಿದೆ. ನಟ ಪ್ರಜ್ವಲ್ ದೇವರಾಜ್ ಇನ್ನಿಲ್ಲ ಎಂಬ ಪೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆ, ಪೋಟೋ ನೋಡಿ ಕುಟುಂಬಸ್ಥರು ಬೇಸರ ಹೊರಹಾಕಿದ್ದು ಪ್ರಜ್ವಲ್‌ ಅವರು ಕ್ಷೇಮವಾಗಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ವದಂತಿಗಳನ್ನು ಹಬ್ಬಿಸಲಾಗಿದೆ. ಪ್ರಜ್ವಲ್ ದೇವರಾಜ್ ಅವರ ಪೋಟೋಗಳನ್ನ ದುರ್ಬಳಕೆ ಮಾಡಲಾಗಿದೆ ಎಂದಿದ್ದಾರೆ. ಕಿಡಿಗೇಡಿಗಳು ಪ್ರಜ್ವಲ್ ದೇವರಾಜ್ ಆರೋಗ್ಯದ ಬಗ್ಗೆ ಅನಗತ್ಯ ಸುಳ್ಳು ವದಂತಿ ಹಬ್ಬಿಸಿದ್ದಾರೆ. ಸುಳ್ಳು ಸುದ್ದಿ ಹಬ್ಬಿಸಿದವರ ವಿರುದ್ಧ ದೂರು ನೀಡಲು ಕುಟುಂಬದವರು ನಿರ್ಧರಿಸಿದ್ದಾರೆ ಎನ್ನಲಾಗಿದೆ. ‘ಪ್ರಜ್ವಲ್ ದೇವರಾಜ್ ಆರೋಗ್ಯವಾಗಿದ್ದಾರೆ. ಅಭಿಮಾನಿಗಳು ಯಾವುದೇ ಆತಂಕ ಪಡುವ ಅಗತ್ಯವಿಲ್ಲ’ ಎಂದು ಅವರ ಆಪ್ತರು ಮಾಹಿತಿ ನೀಡಿದ್ದಾರೆ.

Previous articleಚಾಲಕರ ಹುದ್ದೆಗೆ ಕನ್ನಡಿಗರು ಸಿದ್ಧರಿರಲಿಲ್ಲವೇ?
Next articleKSRTC ಬಸ್ಸಿನಲ್ಲೇ ಮಗುವಿಗೆ ಜನ್ಮ…