ನನ್ನ ಹೇಳಿಕೆ ಸರಿ ಎಂದು ಮತ್ತೆ ಕನ್ನಡಿಗರ ಕೆಂಗಣ್ಣಿಗೆ ಗುರಿಯಾದ ಕಮಲ್

0
28

ಬೆಂಗಳೂರು: ನಾನು ಹೇಳಿದ್ದು ನನ್ನ ಪ್ರಕಾರ ಸರಿ, ನಾನು ಕ್ಷಮೆ ಕೇಳಲ್ಲ ಎಂದು ನಟ ಕಮಲ್ ಹಾಸನ್ ಮತ್ತೇ ಉದ್ಧಟತನ ಮೆರೆದಿದ್ದಾರೆ.
ಸಿನಿಮಾ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾನು ಸಮಸ್ಯೆಗೆ ಸಿಲುಕಿದಾಗ ನನಗೆ ಬೆಂಬಲವಾಗಿ ಕನ್ನಡಿಗರು ನಿಂತಿದ್ರು. ಚೆನ್ನೈನಲ್ಲಿ ಸಮಸ್ಯೆ ಆದಾಗ ಕನ್ನಡಿಗರು ಸಪೋರ್ಟ್ ಮಾಡಿದ್ರು. ನನ್ನ ಸಿನಿಮಾಗಳನ್ನ ಅಭಿಮಾನಿಗಳು ನೋಡ್ತಾರೆ, ರಾಜಕಾರಣಿಗಳಿಗೆ ಭಾಷಾ ಜ್ಞಾನ ಇಲ್ಲ. ನನ್ನ ಪ್ರಕಾರ ನನ್ನ ಹೇಳಿಕೆ ಸರಿ ಇದೆ, ಭಾಷೆ ಬಗ್ಗೆ ಮಾತಾಡಲು ರಾಜಕಾರಣಿಗಳಿಗೆ ಅರ್ಹತೆ ಇಲ್ಲ. ಅನೇಕ ಇತಿಹಾಸಕಾರರು ನನಗೆ ಭಾಷಾ ಇತಿಹಾಸವನ್ನು ಕಲಿಸಿದ್ದಾರೆ. ತಮಿಳುನಾಡು ಒಂದು ವಿಶಾಲ ಹೃದಯ ರಾಜ್ಯ. ನನ್ನ ಪ್ರಕಾರ ನನ್ನ ಹೇಳಿಕೆ ಸರಿ ಇದೆ” ಎಂದು ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ.

Previous articleರಾಜಕಾಲುವೆಗೆ ಬಿದ್ದ ಕಾರು
Next articleಅಬ್ದುಲ್ ರಹ್ಮಾನ್ ಕೊಲೆ – ಮೂವರು ವಶಕ್ಕೆ..?