Home Advertisement
Home ನಮ್ಮ ಜಿಲ್ಲೆ ಕಲಬುರಗಿ ನಾಳೆ ಕಲಬುರಗಿಯಲ್ಲಿ ಸಚಿವ ಸಂಪುಟ ಸಭೆ

ನಾಳೆ ಕಲಬುರಗಿಯಲ್ಲಿ ಸಚಿವ ಸಂಪುಟ ಸಭೆ

0
111
siddu

ಕಲಬುರಗಿ: ಕಲ್ಯಾಣ ಕರ್ನಾಟಕದ ಭಾಗವಾದ ಕಲಬುರಗಿಯಲ್ಲಿ ನಾಳೆ ಸಚಿವ ಸಂಪುಟ ಸಭೆ ನಡೆಸಲಾಗುತ್ತಿದ್ದು, ಈ ಭಾಗದ ಅಭಿವೃದ್ಧಿಗಾಗಿ ಪೂರಕ ಚರ್ಚೆ ಹಾಗೂ ತೀರ್ಮಾನಗಳನ್ನು ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಕಲಬುರಗಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ದಿಗಾಗಿ ಆಯವ್ಯಯದಲ್ಲಿ ರೂಪಿಸಲಾಗಿರುವ ಯೋಜನೆಗಳು ಹಾಗೂ ಇನ್ನಿತರ ಪ್ರಮುಖ ವಿಷಯಗಳ ಬಗ್ಗೆ ಚರ್ಚಿಸಲಾಗುವುದು. ಕಲ್ಯಾಣ ಕರ್ನಾಟಕದ ಜಿಲ್ಲೆಗಳಲ್ಲಿನ ಜನರಿಗೆ ಉದ್ಯೋಗಾವಕಾಶಗಳ ಬಗ್ಗೆ ಹಾಗೂ ಪ್ರತ್ಯೇಕ ಸಚಿವಾಲಯ ರಚನೆ ಬಗ್ಗೆಯೂ ಚರ್ಚಿಸಲಾಗುವುದು. ಕಾಂಗ್ರೆಸ್ ಸರ್ಕಾರ ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿಯ ಪರವಾಗಿದೆ ಎಂದರು.
371ಜೆ ಜಾರಿಗೆ ತಂದಿದ್ದು ಕಾಂಗ್ರೆಸ್ ಸರ್ಕಾರ
ಮನಮೋಹನ್ ಸಿಂಗ್ ನೇತೃತ್ವದ ಕೇಂದ್ರ ಸರ್ಕಾರದ ಅವಧಿಯಲ್ಲಿ 371ಜೆ ಕಾನೂನು ತರಲಾಗಿದ್ದು, ಇದಕ್ಕಾಗಿ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಹಾಗೂ ಮಾಜಿ ಮುಖ್ಯಮಂತ್ರಿ ಧರಂಸಿಂಗ್ ಅವರು ಶ್ರಮವಹಿಸಿದ್ದರು. 2013ರಲ್ಲಿ ಈ ಕಾನೂನನ್ನು ಕರ್ನಾಟಕದಲ್ಲಿ ಜಾರಿಗೆ ತರಲು ಕಾಂಗ್ರೆಸ್ ಸರ್ಕಾರ ಪ್ರಯತ್ನಿಸಿತೇ ಹೊರತು ಬಿಜೆಪಿಯವರಲ್ಲ. ವಾಜಪೇಯಿಯವರು ಪ್ರಧಾನಿಯಾಗಿದ್ದ ಸಂದರ್ಭದಲ್ಲಿ ಕೇಂದ್ರ ಸರ್ಕಾರ ಈ ಕಾನೂನನ್ನು ಜಾರಿಗೆ ತರಲು ತಿರಸ್ಕರಿಸಿದ್ದರು ಎಂದರು.
ಕಲ್ಯಾಣ ಕರ್ನಾಟಕಕ್ಕೆ 5000 ಕೋಟಿ ಅನುದಾನ
ಕಾಂಗ್ರೆಸ್ ಸರ್ಕಾರದ ಮೇಲೆ ಕಲ್ಯಾಣ ಕರ್ನಾಟಕ ಭಾಗದ ಜನರ ನಿರೀಕ್ಷೆಯಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಬಡವರ ಪರವಾದ ಸರ್ಕಾರ ನಮ್ಮದು. ಆದ್ದರಿಂದ ಈ ಭಾಗದ ಅಭಿವೃದ್ಧಿಗಾಗಿ 5000 ಕೋಟಿ ರೂ.ಗಳನ್ನು ನೀಡಲಾಗಿದೆ ಎಂದರು.
ನಾಗಮಂಗಲ ಪ್ರಕರಣ-ಸಂಬಂಧಪಟ್ಟ ಪೊಲೀಸ್ ಅಧಿಕಾರಿಗಳ ಅಮಾನತು
ಮಂಡ್ಯ ಜಿಲ್ಲೆಯ ನಾಗಮಂಗಲದ ಗಲಭೆ ಪ್ರಕರಣದ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸುತ್ತಾ, ನಾಗಮಂಗಲ ಶಾಂತವಾಗಿದೆ. ಗಲಭೆ ಪ್ರಕರಣಕ್ಕೆ ಪೊಲೀಸರ ಕರ್ತವ್ಯ ವೈಫಲ್ಯವ ಕಾರಣವೆಂದು ಮೇಲ್ನೋಟಕ್ಕೆ ಕಂಡುಬಂದಿರುವುದರಿಂದ, ಸಂಬಂಧಪಟ್ಟ ಉಪಪೊಲೀಸ್ ವರಿಷ್ಠಾಧಿಕಾರಿ ಹಾಗೂ ಇನ್ಸ್‌ಪೆಕ್ಟರ್‌ನ್ನು ಅಮಾನತುಗೊಳಿಸಲಾಗಿದೆ. ಈ ಪ್ರಕರಣದಲ್ಲಿ ಹಾನಿಗೊಳಗಾದ ಅಂಗಡಿ ಮುಂಗಟ್ಟ, ವಾಹನಗಳಿಗೆ ಪರಿಹಾರ ನೀಡುವ ಬಗ್ಗೆ ಕ್ರಮ ವಹಿಸಲಾಗುವುದು ಎಂದರು.