ನಾಳೆ ಪ್ರಿಯಾಂಕಾ ಗಾಂಧಿ ಬೆಳಗಾವಿಗೆ

0
20

ಬೆಳಗಾವಿ: ವಿಧಾನಸಭೆ ಚುನಾವಣೆ ಹಿನ್ನೆಲೆ ಏ. 30ರಂದು ಶಾಸಕಿ ಅಂಜಲಿ ನಿಂಬಾಳಕರ್‌ ಪರ ಮತಯಾಚನೆ ಮಾಡಲು ಖಾನಾಪುರ ಪಟ್ಟಣಕ್ಕೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಆಗಮಿಸಲಿದ್ದಾರೆ. ಅಲ್ಲದೆ ಬೆಳಗ್ಗೆ 11 ಗಂಟೆಗೆ ಖಾನಾಪುರದ ಮಲಪ್ರಭ ಕ್ರೀಡಾಂಗಣದಲ್ಲಿ ಬಹಿರಂಗ ಸಭೆಯಲ್ಲಿ ಮಾತನಾಡಲಿದ್ದಾರೆ.
ಏಪ್ರೀಲ್ 30ರಂದು ಸಂಜೆ 4 ಗಂಟೆಗೆ ಕುಡಚಿ ಮತಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಮಹೇಂದ್ರ ತಮ್ಮಣ್ಣವರ್‌ ಪರ ಹಾರೂಗೇರಿ ಪಟ್ಟಣದ ಕಾಂಗ್ರೆಸ್‌ ಕಾರ್ಯಾಲಯದಿಂದ ಎಚ್‌ ವಿ ಎಚ್‌ ಕಾಲೇಜು ವರೆಗೆ ರೋಡ್ ಶೋ ನಡೆಸಲಿದ್ದಾರೆ. ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್‌ ಜಾರಕಿಹೊಳಿ ಅವರು ಸೇರಿದಂತೆ ರಾಜ್ಯ ಕಾಂಗ್ರೆಸ್‌ ನಾಯಕರು ಪ್ರಿಯಾಂಕ್ ಗಾಂಧಿ ವಾದ್ರಾ ಅವರಿಗೆ ಸಾಥ್‌ ನೀಡಲಿದ್ದಾರೆ.

Previous articleಜೆಡಿಎಸ್ ಶಾಸಕರ ವಿರುದ್ದ ಸಂಸದೆ ಸುಮಲತಾ ಅಂಬರೀಶ್ ವಾಗ್ದಾಳಿ‌
Next articleಕಾಯಕ ಮತ್ತು ದಾಸೋಹದ ಪ್ರೇರಣೆ ನಮ್ಮ ಅಭಿವೃದ್ಧಿ