ನಾಳೆ ಸುಮಲತಾ ಅಂಬರೀಶ್ ಬಿಜೆಪಿ ಸೇರ್ಪಡೆ.

0
19

ಬೆಂಗಳೂರು: ಬೆಂಬಲಿಗರೊಂದಿಗೆ ಬಿಜೆಪಿಯನ್ನು ಸೇರುತ್ತಿರುವುದಾಗಿ ಸುಮಲತಾ ಅಂಬರೀಶ್‌ ತಿಳಿಸಿದ್ದಾರೆ.
ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿರುವ ಅವರು ಮಂಡ್ಯದ ಅಭಿವೃದ್ಧಿಯೇ ನನ್ನ ಮೂಲ ಮಂತ್ರವಾಗಿಸಿಕೊಂಡು ಹಾಗೂ ನಮ್ಮೆಲ್ಲರ ನೆಚ್ಚಿನ ಪ್ರಧಾನ ಮಂತ್ರಿಗಳಾದ ಶ್ರೀ ನರೇಂದ್ರ ಮೋದಿ ಅವರು ಮತ್ತೊಮ್ಮೆ ಪ್ರಧಾನಿ ಆಗಲಿ ಎನ್ನುವ ಆಶಯದೊಂದಿಗೆ ಭಾರತೀಯ ಜನತಾ ಪಕ್ಷವನ್ನು ಬೆಂಬಲಿಸುವುದಾಗಿ ಘೋಷಿಸಿದ್ದೆ. ಅದರಂತೆಯೇ, ಬಿಜೆಪಿ ನಾಯಕರ ಸಮ್ಮುಖದಲ್ಲಿ 5 ಏಪ್ರಿಲ್ 2024ರ ಶುಕ್ರವಾರ ಬೆಳಿಗ್ಗೆ 11.30ಕ್ಕೆ ಬೆಂಗಳೂರಿನ ಭಾರತೀಯ ಜನತಾ ಪಕ್ಷದ ಕಚೇರಿಯಲ್ಲಿ ಅಧಿಕೃತವಾಗಿ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆ ಆಗುತ್ತಿರುವೆ. ನಮ್ಮ ಕರುನಾಡಿನ ಸಕ್ಕರೆಯ ನಾಡು ಮಂಡ್ಯದ ನನ್ನ ಸ್ವಾಭಿಮಾನಿ ಬಂಧುಗಳ, ಡಾ.ಅಂಬರೀಶ್ ಅವರ ಅಭಿಮಾನಿಗಳ ಹಾಗೂ ಹಿತೈಷಿಗಳ ಹಾರೈಕೆ ಮತ್ತು ಆಶೀರ್ವಾದ ಎಂದಿನಂತೆ ಇರಲಿ ಎಂದು ನನ್ನ ಸವಿನಯ ಕೋರಿಕೆ ಎಂದಿದ್ದಾರೆ.

Previous articleಕ್ಯಾನ್ಸರ್‌ಗಾಗಿ ಭಾರತದ ಮೊದಲ ಕೈಗೆಟುಕುವ ಚಿಕಿತ್ಸಾ ಪದ್ದತಿ
Next articleಸಂಚು ರೂಪಿಸಿ ಕೇಜ್ರಿವಾಲ್ ಬಂಧನ