ನಾಳೆ ಹುಬ್ಬಳ್ಳಿ-ಧಾರವಾಡ ಅವಳಿನಗರಕ್ಕೆ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್

0
14
ಅಶ್ವಿನಿ ವೈಷ್ಣವ್

ಹುಬ್ಬಳ್ಳಿ: ಕೇಂದ್ರ ರೈಲ್ವೆ ಮತ್ತು ಎಲೆಕ್ಟ್ರಾನಿಕ್ಸ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಅಶ್ವಿನಿ ವೈಷ್ಣವ್ ಅವರು ಅವಳಿನಗರದ ಅಭಿವೃದ್ಧಿ ಕಾರ್ಯಗಳ ಲೋಕಾರ್ಪಣೆ ಕಾರ್ಯಕ್ರಮಕ್ಕೆ ಅ. 11ರಂದು ಮಂಗಳವಾರ ಅವಳಿನಗರಕ್ಕೆ ಆಗಮಿಸುತ್ತಿದ್ದಾರೆ.
ಅಂದು ಬೆಳಿಗ್ಗೆ 11ಗಂಟೆಗೆ ಇಲ್ಲಿನ ಸವಾಯಿ ಗಂಧರ್ವ ಸಭಾಂಗಣದಲ್ಲಿ ನಡೆಯುವ ಸವಾಯಿ ಗಂಧರ್ವರ ಸ್ಮರಣಾರ್ಥ ಅಂಚೆ ಚೀಟಿ ಬಿಡುಗಡೆ ಮಾಡುವರು. ನಂತರ ಮಧ್ಯಹ್ನ 12.30ಕ್ಕೆ 20 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿಗೊಂಡಿರುವ ಧಾರವಾಡ ರೈಲ್ವೆ ನಿಲ್ದಾಣವನ್ನು ಲೋಕಾರ್ಪಣೆಗೊಳಿಸುವರು. ಮಧ್ಯಾಹ್ನ 3ಗಂಟೆಗೆ 115 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿರುವ ಹುಬ್ಬಳ್ಳಿ ರೈಲ್ವೆ ನಿಲ್ದಾಣದ ಮೂರನೇ ಪ್ರವೇಶದ್ವಾರವನ್ನು ಲೋಕಾರ್ಪಣೆಗೊಳಿಸುವ ಸಚಿವ ಅಶ್ವಿನಿ ವೈಷ್ಣವ್ ಅವರು ಆ ನಂತರ ಹುಬ್ಬಳ್ಳಿ ರೈಲು ನಿಲ್ದಾಣದಲ್ಲಿ ಹುಬ್ಬಳ್ಳಿ-ನಿಜಾಮುದ್ದಿನ್ ಹೊಸ ರೈಲಿಗೆ ಹಸಿರು ನಿಶಾನೆ ತೋರಿಸುವರು.

Previous articleಆತ್ಮಹತ್ಯೆಗೆ ಶರಣಾದ ದಂಪತಿ
Next article20ಕೋಟಿಯಲ್ಲಿ ನವಿಕೃತಗೊಂಡ ಧಾರವಾಡ ರೈಲ್ವೆ ನಿಲ್ದಾಣ ಹೇಗಿದೆ?