ನಾವು ಕೂಡ ಹನುಮಂತನ ಭಕ್ತರು

0
20

ಮೈಸೂರು: ಹನುಮಂತನ ಹೆಸರಿಟ್ಟುಕೊಂಡವರೆಲ್ಲಾ ಹನುಮಂತ ಆಗಲು ಸಾಧ್ಯವೇ ? ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಮೈಸೂರಿನಲ್ಲಿ ಪ್ರಶ್ನಿಸಿದ್ದಾರೆ. ನಗರದ ಚಾಮುಂಡೇಶ್ವರಿ ದೇವಾಲಯಕ್ಕೆ ಭೇಟಿ ನೀಡಿ, ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪ್ರಣಾಳಿಕೆ ನೋಡಿ ಬಿಜೆಪಿಗರಿಗೆ ಗಾಬರಿಯಾಗಿದೆ. ಬಜರಂಗದಳ ಒಂದು ರಾಜಕೀಯ ಪಕ್ಷದ ವಿಭಾಗ. ಹನುಮಂತ ಹೆಸರು ಇಟ್ಟು ಕೊಂಡವರೆಲ್ಲಾ ಆಂಜನೇಯ ಆಗಲ್ಲ. ಬಜರಂಗದಳದವರು ನೈತಿಕ ಪೊಲೀಸ್​​ಗಿರಿ ಮಾಡುತ್ತಿದ್ದಾರೆ. ದೇವರ ಹೆಸರನ್ನು ರಾಜಕೀಯವಾಗಿ ಬಳಸಿಕೊಳ್ಳಲು ಬಿಜೆಪಿ ಯತ್ನಿಸುತ್ತಿದೆ. ಬಿಜೆಪಿಯವರು ಒಂದಾದ್ರೂ ಆಂಜನೇಯ ದೇಗುಲ ಕಟ್ಟಿದ್ದಾರಾ? ರಾಜ್ಯದಲ್ಲಿ ಆಂಜನೇಯ ಹುಟ್ಟಿದ್ದಕ್ಕೆ ಸಾಕ್ಷಿ ಇದೆ. ಅಧಿಕಾರಕ್ಕೆ ಬಂದರೆ ಆಂಜನೇಯ ದೇಗುಲ ಅಭಿವೃದ್ಧಿಗೆ ಒತ್ತು. ಆಂಜನೇಯ ದೇಗುಲ ಅಭಿವೃದ್ಧಿಗೆ ವಿಶೇಷ ಒತ್ತು ನೀಡುತ್ತೇವೆ. ಅಂಜನಾದ್ರಿ ಬೆಟ್ಟದ ಅಭಿವೃದ್ಧಿಗೆ ವಿಶೇಷ ಮಂಡಳಿ ಮಾಡುತ್ತೇವೆ. ಯುವಕರಲ್ಲಿ ಆಂಜನೇಯ ಸಿದ್ಧಾಂತ ಬೆಳೆಸಲು ಪ್ರತ್ಯೇಕ ಕಾರ್ಯಕ್ರಮ ನಡೆಸುತ್ತೇವೆ. ಪ್ರತಿ ತಾಲೂಕಿನಲ್ಲೂ ಆಂಜನೇಯನ ಹೆಸರಿನಲ್ಲಿ ಪ್ರತ್ಯೇಕ ಕಾರ್ಯಕ್ರಮ ನಡೆಸುತ್ತೇವೆ ಎಂದರು. ಬಜರಂಗದಳದವರು ನೈತಿಕ ಪೊಲೀಸ್ ಗಿರಿ ಮಾಡುತ್ತಿದ್ದಾರೆ. ಬಜರಂಗ ಬಲಿಯ ನಿಜವಾದ ಭಕ್ತರು ನಾವು. ಅನಗತ್ಯವಾಗಿ ಬಿಜೆಪಿ ಪ್ರಚೋದನೆ ಮಾಡುವ ಕೆಲಸ ಮಾಡುತ್ತಿದೆ ಎಂದು ಗುಡುಗಿದರು.

Previous articleಪ್ರತಿಭಟನಾ ನಿರತ ಕುಸ್ತಿಪಟುಗಳು, ಪೊಲೀಸರ ನಡುವೆ ಸಂಘರ್ಷ
Next articleಪ್ರಣಾಳಿಕೆಯಲ್ಲಿ ವಧು-ವರರಿಗೆ ಮದುವೆ ಭಾಗ್ಯ