ನಿಮ್ಮ ಶುಭ ಹಾರೈಕೆಯಿಂದ, ಶೀಘ್ರದಲ್ಲಿಯೇ ಜನಸೇವೆಗೆ ಮರಳುತ್ತೇನೆ

0
32
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ಆಸ್ಪತ್ರೆಗೆ ನನ್ನನ್ನು ನೋಡಲು ಬಂದರೇ, ಆಸ್ಪತ್ರೆಯಲ್ಲಿರುವ ಇತರ ರೋಗಿಗಳಿಗೆ ತೊಂದರೆಯಾಗುತ್ತದೆ. ಹೀಗಾಗಿ ನೀವ್ಯಾರು ಆಸ್ಪತ್ರೆಗೆ ಬರಬಾರದೆಂದು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮನವಿ ಮಾಡಿದ್ದಾರೆ
ಮೊಣಕಾಲು ನೋವು ತೀವ್ರವಾಗಿದ್ದರಿಂದ ವೈದ್ಯರ ಸಲಹೆ ಮೇರೆಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವ ಅವರು ಸಾಮಾಜಿಕ ಜಾಲತಾಣದಲ್ಲಿ ಈ ಕುರಿತು ಪೋಸ್ಟ್‌ ಮಾಡಿದ್ದಾರೆ.
ಆತ್ಮೀಯರೇ, ನನಗೆ ಲಘು ಶಸ್ತ್ರ ಚಿಕಿತ್ಸೆಯಾಗಿದ್ದು, ವೈದ್ಯರ ಸಲಹೆ ಮೇರೆಗೆ ಈಗ ಸಂಪೂರ್ಣ ವಿಶ್ರಾಂತಿ ಪಡೆಯುತ್ತಿದ್ದೇನೆ. ಆದಷ್ಟು ಬೇಗ ಸಂಪೂರ್ಣ ಗುಣಮುಖನಾಗಿ ನಿಮ್ಮ ಮುಂದೆ ಬರಲು ಕಾತುರದಿಂದ ಕಾಯುತ್ತಿದ್ದೇನೆ. ಸದ್ಯ ಆಸ್ಪತ್ರೆಯಲ್ಲಿರುವ ಕಾರಣ, ನೀವೆಲ್ಲರೂ ಆಸ್ಪತ್ರೆಗೆ ನನ್ನನ್ನು ನೋಡಲು ಬಂದರೇ, ಆಸ್ಪತ್ರೆಯಲ್ಲಿರುವ ಇತರ ರೋಗಿಗಳಿಗೆ ತೊಂದರೆಯಾಗುತ್ತದೆ. ಹೀಗಾಗಿ ನೀವ್ಯಾರು ಆಸ್ಪತ್ರೆಗೆ ಬರಬಾರದೆಂದು ಕಳಕಳಿಯಾಗಿ ಮನವಿ ಮಾಡುತ್ತೇನೆ.
ನಿಮ್ಮ ಶುಭ ಹಾರೈಕೆಗಳು ನನ್ನನ್ನು ಮಾನಸಿಕವಾಗಿ ಮತ್ತಷ್ಟು ಗಟ್ಟಿ ಮಾಡಿದ್ದು, ಶೀಘ್ರದಲ್ಲಿಯೇ ಜನಸೇವೆಗೆ ಮರಳುತ್ತೇನೆ. ಶುಭ ಹಾರೈಸಿದ ಪ್ರತಿಯೊಬ್ಬರಿಗೂ ನನ್ನ ಹೃದಯಾಂತರಾಳದಿಂದ ಅನಂತ ಅನಂತ ಧನ್ಯವಾದಗಳು ಎಂದಿದ್ದಾರೆ.

Previous articleಐಟಿ ದಾಳಿ ಅಕ್ರಮ ನಗದು ರಾಜ್ಯದ ಮಾನ ಹರಾಜು
Next articleಕರ್ನಾಟಕ ಸಂಭ್ರಮ-50 ಲಾಂಛನ ಬಿಡುಗಡೆ