ನಿಮ್ಹಾನ್ಸ್‌ನಲ್ಲಿ ಕೆಎಎಸ್‌ ಅಧಿಕಾರಿಯ ನೇಮಕಾತಿಗೆ ಕ್ರಮ ಕೈಗೊಳ್ಳಿ: ಸಿಎಂ ಸೂಚನೆ

0
41

ಬೆಂಗಳೂರು: ರಾಜೀವ್‌ ಗಾಂಧಿ ವೈದ್ಯಕೀಯ ವಿವಿಯಲ್ಲಿ ಹೆಚ್ಚುವರಿಯಾಗಿ ಸಂಗ್ರಹವಾಗಿರುವ ಮೊತ್ತವನ್ನು ಸರ್ಕಾರಿ ವೈದ್ಯಕೀಯ ಕಾಲೇಜುಗಳ ಮೂಲಸೌಲಭ್ಯಗಳಿಗಾಗಿ ಒದಗಿಸಲು ಮತ್ತು ನಿಮ್ಹಾನ್ಸ್‌ನಲ್ಲಿ ಕರ್ನಾಟಕ ಆಡಳಿತ ಸೇವೆಯ ಅಧಿಕಾರಿಯ ನೇಮಕಾತಿಗೆ ಕ್ರಮ ಕೈಗೊಳ್ಳಲು ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ್ ಪಾಟೀಲ್ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚನೆ ನೀಡಿದರು.
ಕೃಷ್ಣಾದಲ್ಲಿ ನಡೆದ ವೈದ್ಯಕೀಯ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನೆ ಸಭೆಯಲ್ಲಿ ಈ ಸೂಚನೆ ನೀಡಿದರು. ಪ್ರಸ್ತುತ ಸಾಲಿನಲ್ಲಿ ವೈದ್ಯಕೀಯ ಕಾಲೇಜುಗಳ ನಿರ್ಮಾಣ ಮತ್ತು ಉಪಕರಣಗಳ ಖರೀದಿಗೆ 400 ಕೋಟಿ ರೂ. ಹಾಗೂ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆಗಳ ನಿರ್ಮಾಣಕ್ಕಾಗಿ 130 ಕೋಟಿ ರೂ. ಅನುದಾನ ಒದಗಿಸಲಾಗಿದೆ. ಈ ಕಾಮಗಾರಿಗಳನ್ನು ಆದಷ್ಟು ಬೇಗನೆ ಪೂರ್ಣಗೊಳಿಸಲು ಸೂಚಿಸಿದರು.
2024-25ನೇ ಸಾಲಿನಲ್ಲಿ ವೈದ್ಯಕೀಯ ಶಿಕ್ಷಣ ಇಲಾಖೆಗೆ 4331 ಕೋಟಿ ರೂ. ಅನುದಾನ ಹಂಚಿಕೆ ಮಾಡಲಾಗಿದ್ದು, ಇದುವರೆಗೆ 3099 ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ. ಇದರಲ್ಲಿ 3005 ಕೋಟಿ ರೂ. ವೆಚ್ಚ ಮಾಡಲಾಗಿದ್ದು, ಬಿಡುಗಡೆ ಮೊತ್ತಕ್ಕೆ ಶೇ. 96.97 ಪ್ರಗತಿ ಸಾಧಿಸಲಾಗಿದೆ ಎಂದು ಸಚಿವರು ವಿವರಿಸಿದರು.

Previous articleನ್ಯಾಯಾಲಯದ ಆವರಣದಲ್ಲೇ ಯುವಕನ ಮೇಲೆ ಮಾರಣಾಂತಿಕ ಹಲ್ಲೆ: ಮೂವರ ಬಂಧನ
Next articleಖ್ಯಾತ ನಿರೂಪಕಿ ಅಪರ್ಣ ಸಹೋದರ ಚೈತನ್ಯ ನಿಧನ