ನಿಯಂತ್ರಣ ತಪ್ಪಿ ಮನೆ ಮೇಲೆ ಬಿದ್ದ ವಾಹನ

0
14

ಮಂಗಳೂರು: ಬಂಟ್ವಾಳ ತಾಲೂಕಿನ ಸಾರಡ್ಕ​ ಬಳಿ ವಾಹನವೊಂದು ನಿಯಂತ್ರಣ ತಪ್ಪಿ ಮನೆ ಮೇಲೆ ಬಿದ್ದ ಘಟನೆ ನಡೆದಿದೆ. ವಾಹನ ಬಿದ್ದ ರಭಸಕ್ಕೆ ಹಂಚಿನ ಮನೆ ಸಂಪೂರ್ಣ ಜಖಂಗೊಂಡಿದೆ. ಮುಂಜಾನೆ 4:30 ರ ಸುಮಾರಿಗೆ ಈ ಘಟನೆ ಸಂಭವಿಸಿರಬಹದು ಎನ್ನಲಾಗಿದೆ. ವಾಹನ ಮನೆ ಮೇಲೆ ಬಿದ್ದಿರುವ ಪರಿಣಾಮ ಮನೆಯಲ್ಲಿದ್ದ ಮಹಿಳೆಗೆ ಗಾಯಗಳಾಗಿದ್ದು, ಮಹಿಳೆಯನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ಕ್ರೇನ್ ಮೂಲಕ ವಾಹನವನ್ನು ಮೇಲೆತ್ತುವ ಕಾರ್ಯ ನಡೆದಿದೆ. ಸ್ಥಳಕ್ಕೆ ವಿಟ್ಲ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

Previous articleವಾಂಬೆ ಕಾಲೋನಿ ಗಲಾಟೆ: ಕ್ರಮಕ್ಕೆ ಸೂಚನೆ
Next articleಚೆನ್ನೈ-ಮೈಸೂರು ವಂದೇ ಭಾರತ್ ರೈಲಿಗೆ ಕಲ್ಲು