ನಿರ್ಜನ ಪ್ರದೇಶದಲ್ಲಿ ಪತ್ತೆಯಾದ ನವಜಾತ ಶಿಶು

0
39

ತುಮಕೂರು: ಬೆಳ್ಳಂ ಬೆಳಿಗ್ಗೆ ನವಜಾತ ಶಿಶುವೊಂದು ನಿರ್ಜನ ಪ್ರದೇಶದಲ್ಲಿ ಪತ್ತೆಯಾಗಿದೆ.
ಜಿಲ್ಲೆಯ ಸಿರಾ ತಾಲ್ಲೂಕಿನ ಮಾಟನಹಳ್ಳಿಯಲ್ಲಿ ಬೆಳಿಗ್ಗೆ ನಿರ್ಜನ ಪ್ರದೇಶದಲ್ಲಿ ಮಗುವೊಂದು ಅಳುತ್ತಿರುವ ಶಬ್ದ ಕೇಳಿ ಸ್ಥಳಿಯರು ಹೋಗಿ ನೋಡಿದಾದ ಪೊದೆಯ ಒಳಗೆ ಹೆಣ್ಣು ಶಿಶುವೊಂದು ಪತ್ತೆಯಾಗಿದೆ, ನವಜಾತ ಶಿಶು ಕಂಡ ಸ್ಥಳೀಯರು ಕೂಡಲೇ ಪೊಲೀಸರಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಸಂಬಂಧಿಸಿದ ಅಧಿಕಾರಿಗಳಿಗೆ ಮಾಹಿತಿ ನೀಡಿ ಬಳಿಕ ಮಗುವನ್ನು ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ತುಮಕೂರು ಜಿಲ್ಲಾಸ್ಪತ್ರೆಗೆ ರವಾನೆ ಮಾಡಿದ್ದಾರೆ. ಇನ್ನು ಈ ಕುರಿತಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಹೀನ ಕೃತ್ಯ ಎಸಗಿದವರ ಪತ್ತೆಗೆ ಮುಂದಾಗಿದ್ದಾರೆ.

Previous articleಹಕ್ಕುಗಳು ಕಾರ್ಯಗತವಾಗದೆ, ಕೇವಲ ಕಾಗದದ ಮೇಲೆ ಉಳಿದರೆ ಅಭಿವೃದ್ಧಿ ಸಾಧ್ಯವಿಲ್ಲ
Next articleಬೆಂಗಳೂರಿಗೆ ಈಗೊಬ್ಬ ಘಜ್ನಿ, ಘೋರಿ ವಕ್ಕರಿಸಿದ್ದಾನೆ…