ನಿಷ್ಠಾವಂತ ಅಧಿಕಾರಿಗಳಿಗೆ ಕಾಂಗ್ರೆಸ್ ಸರ್ಕಾರದಲ್ಲಿ ಬೆಲೆ ಇಲ್ಲ

0
48

ಯಾದಗಿರಿ: ರಾಜ್ಯದ ನಿಷ್ಠಾವಂತ ಅಧಿಕಾರಿಗಳಿಗೆ ಈ ಸರ್ಕಾರದಲ್ಲಿ ಬೆಲೆ ಇಲ್ಲ, ಜಿಲ್ಲೆಯಲ್ಲಿ ಪ್ರಭಾವಿ ಮಂತ್ರಿಗಳು ಚೇಲಾಗಳ ಹಿಂದೆ ಮುಂದೆ ಇರುವ ಬೆಂಬಲಿಗರಿಗೆ ಉತ್ತೇಜನ ಕೊಡುವುದಕ್ಕೆ ಅಧಿಕಾರಿಗಳನ್ನು ವರ್ಗಾವಣೆ ಮಾಡುತ್ತಿದ್ದಾರೆಂದು ನಿಖಿಲ್ ಕುಮಾರಸ್ವಾಮಿ ಆರೋಪಿಸಿದರು.
ಅಧಿಕಾರಿಗಳು ಯಾರ ಕೈಗೊಂಬೆಯಾಗಿ ಕೆಲಸ ಮಾಡುವ ಅಗತ್ಯವಿಲ್ಲ, ರಾಜ್ಯದಲ್ಲಿ ನಿಷ್ಠಾವಂತ, ಪ್ರಾಮಾಣಿಕ ಅಧಿಕಾರಿಗಳಿಗೆ ಉಸಿರುಗಟ್ಟುವ ವಾತಾವರಣವಿದೆ. ಜಿಲ್ಲೆಯಲ್ಲಿ ಯಾದಗಿರಿ ಎಸ್ಪಿ ಅವರ ಎತ್ತಂಗಡಿಗೆ ಫ್ಲಾನ್ ನಡೆದಿದೆ ಈ ಸರ್ಕಾರದಲ್ಲಿ ನಿಷ್ಠಾವಂತ ಅಧಿಕಾರಿಗಳಿಗೆ ಬೆಲೆ ಇಲ್ಲ ಎಂದು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.
ಯಾದಗಿರಿಯ ಎಸ್ಪಿಯಾಗಿ ನೇಮಕಗೊಂಡು ಕೇವಲ 7 ತಿಂಗಳಲ್ಲಿ ಇಸ್ಪೀಟ್, ಮಟ್ಕಾ, ಅಕ್ರಮ ಮರಳುಗಾರಿಕೆ ಹಾಗೂ ಕೋಳಿ ಅಂಕಣಗಳ ಮೇಲೆ ನಿಷೇಧ ಹೇರಿದ್ದರು. ಇದರಿಂದ ಕಾಂಗ್ರೆಸ್ ಪ್ರಭಾವಿ ಶಾಸಕರು, ಕೆಲ‌ ಹಿಂಬಾಲಕರು, ಎಸ್ಪಿ ಅವರ ಎತ್ತಂಗಡಿಗೆ ಮುಂದಾಗಿದ್ದಾರೆ ಎಂದು ಆರೋಪಿಸಿದರು.
ನೆರೆಯ ಚಿತ್ತಾಪುರದಲ್ಲಿ 165 ಕೋಟಿ ರೂ. ಅಕ್ರಮ ಮರುಳು ದಂಧೆ ನಡೆಯುತ್ತಿದೆ. ಇದರ ಬಗ್ಗೆ ಯಾವುದೇ ತನಿಖೆ ನಡೆಸಿಲ್ಲ ಎಂದು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

Previous articleBhadra Dam: ಭದ್ರಾ ಡ್ಯಾಂನಿಂದ ನದಿಗೆ ನೀರು ಬಿಡುಗಡೆ, ಸ್ಪಷ್ಟನೆ
Next articleರಾಜ್ಯ ಸರ್ಕಾರದಿಂದ ಪ್ರಕೃತಿ ವಿಕೋಪ ಪರಿಹಾರವೇ ಬಂದಿಲ್ಲ