ನೀತಿ ಸಂಹಿತೆ ಉಲ್ಲಂಘನೆ: ಸಚಿವೆ ಶಶಿಕಲಾ ಜೊಲ್ಲೆ ವಿರುದ್ಧ ಎಫ್ ಐಆರ್

0
10
ಶಶಿಕಲಾ ಜೊಲ್ಲೆ

ಬೆಳಗಾವಿ : ಚುನಾವಣಾ ನೀತಿ ಸಂಹಿತೆ ಜಾರಿಯಾದ ನಂತರವು ಬುಧವಾರ ರಾತ್ರಿ ಅದ್ಧೂರಿ ಮಹಿಳಾ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಹಿನ್ನೆಲೆಯಲ್ಲಿ ಮುಜರಾಯಿ ಇಲಾಖೆ ಸಚಿವೆ ನಿಪ್ಪಾಣಿ ಶಾಸಕಿ ಶಶಿಕಲಾ ಜೊಲ್ಲೆ ವಿರುದ್ಧ ಚುನಾವಣಾ ಆಯೋಗ ಪ್ರಕರಣ ದಾಖಲಿಸಿದೆ.
ಬುಧವಾರ ಸಂಜೆ ನಿಪ್ಪಾಣಿ ನಗರದ ಮುನ್ಸಿಪಲ್ ಹೈಸ್ಕೂಲ್ ಮೈದಾನದಲ್ಲಿ ನಡೆದ ಮಹಿಳೆಯರ ಅರಿಶಿನ ಕುಂಕುಮ ಕಾರ್ಯಕ್ರಮದಲ್ಲಿ ಸಚಿವೆ ಶಶಿಕಲಾ ಜೊಲ್ಲೆ ಪೋಟೋ ಹಾಗೂ ಬಿಜೆಪಿ ಬಾವುಟ ಬಳಕೆ ಹಾಗೂ ಊಟದ ವ್ಯವಸ್ಥೆ ಮಾಡಿದ ಹಿನ್ನಲೆಯಲ್ಲಿ ಚುನಾವಣಾ ಇಲಾಖೆ ಸಚಿವೆ ಜೊಲ್ಲೆ ಹಾಗೂ ರಣರಾಗಿಣಿ ಮಹಿಳಾ ಮಂಡಳ ಅಧ್ಯಕ್ಷೆ ವಿರುದ್ಧ ಪ್ರಕರಣ ದಾಖಲಾಗಿದೆ.

Previous articleಎಸ್‌ಎಸ್‌ಎಲ್‌ಸಿ ಪರೀಕ್ಷೆ ಸಿದ್ಧತೆಯಲ್ಲಿದ್ದ ವಿದ್ಯಾರ್ಥಿ ಮೃತದೇಹ ಪತ್ತೆ
Next articleಕನ್ನಡಿಗರ ಮೇಲೆ ಹಲ್ಲೆ, ಬಾವುಟ ತುಳಿದು ಅವಮಾನ..!