ನೂತನ ರಾಜ್ಯಪಾಲರಾಗಿ ಅಜಯ್ ಕುಮಾರ್ ಭಲ್ಲಾ

0
19

1984-ಬ್ಯಾಚ್‌ನ ಭಾರತೀಯ ಆಡಳಿತ ಸೇವೆ (IAS) ಅಧಿಕಾರಿಯಾಗಿರುವ ಭಲ್ಲಾ ಅವರು ಕಳೆದ ವರ್ಷ ಆಗಸ್ಟ್‌ನಲ್ಲಿ ಕೇಂದ್ರ ಗೃಹ ಕಾರ್ಯದರ್ಶಿಯಾಗಿ ನಿವೃತ್ತರಾಗಿದ್ದರು

ಮಣಿಪುರದ 19 ನೇ ರಾಜ್ಯಪಾಲರಾಗಿ ಅಜಯ್ ಕುಮಾರ್ ಭಲ್ಲಾ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ಇಂಫಾಲದ ರಾಜಭವನದಲ್ಲಿ ನಡೆದ ಸಮಾರಂಭದಲ್ಲಿ ಮಣಿಪುರದ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಡಿ ಕೃಷ್ಣಕುಮಾರ್ ಅವರು ಪ್ರಮಾಣ ವಚನ ಬೋಧಿಸಿದ್ದಾರೆ.
ಅಸ್ಸಾಂ-ಮೇಘಾಲಯ ಕೇಡರ್‌ನ 1984-ಬ್ಯಾಚ್‌ನ ಭಾರತೀಯ ಆಡಳಿತ ಸೇವೆ (IAS) ಅಧಿಕಾರಿಯಾಗಿರುವ ಭಲ್ಲಾ ಅವರು ಕಳೆದ ವರ್ಷ ಆಗಸ್ಟ್‌ನಲ್ಲಿ ಕೇಂದ್ರ ಗೃಹ ಕಾರ್ಯದರ್ಶಿಯಾಗಿ ನಿವೃತ್ತರಾಗಿದ್ದರು. ಕಳೆದ ವರ್ಷ ಜುಲೈನಲ್ಲಿ ಮಣಿಪುರದ ಉಸ್ತುವಾರಿ ಗವರ್ನರ್ ಆಗಿ ಅಧಿಕಾರ ವಹಿಸಿಕೊಂಡಿದ್ದ ಲಕ್ಷ್ಮಣ್ ಪ್ರಸಾದ್ ಆಚಾರ್ಯ ಅವರ ಸ್ಥಾನವನ್ನು ಭಲ್ಲಾ ಅವರು ವಹಿಸಿಕೊಂಡರು.

Previous articleಗ್ರಾಪಂ ಕಚೇರಿಯಲ್ಲಿ ಮೌಲ್ವಿ ನಮಾಜು: ಹಿಂದೂ ಸಂಘಟನೆಗಳಿಂದ ಆಕ್ರೋಶ
Next articleರಾಜ್ಯದಲ್ಲಿ ಅರಾಜಕತೆ ಸೃಷ್ಟಿ