ನ್ಯಾಯದ ಹೋರಾಟದಲ್ಲಿ ನಮ್ಮ ಸರ್ಕಾರ

0
14

ಬೆಂಗಳೂರು: ನ್ಯಾಯದ ಹೋರಾಟದಲ್ಲಿ ನಮ್ಮ ಸರ್ಕಾರ ಜೊತೆ ನಿಲ್ಲಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ,
ಪ್ರಜ್ವಲ್​​​ ರೇವಣ್ಣ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್​​​ ನಾಯಕ ರಾಹುಲ್​​​ ಗಾಂಧಿ ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದು ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿರುವ ಅವರು ಸಂಸದ ಪ್ರಜ್ವಲ್ ರೇವಣ್ಣ ಅವರಿಂದ ಅತ್ಯಾಚಾರ, ಅನ್ಯಾಯಕ್ಕೆ ಒಳಗಾದ ಸಂತ್ರಸ್ತರ ರಕ್ಷಣೆಗೆ ನಮ್ಮ ಸರ್ಕಾರ ಬದ್ಧವಾಗಿದೆ. ನಿಷ್ಪಕ್ಷಪಾತ ತನಿಖೆ ನಡೆಸಿ ಪ್ರಕರಣದಲ್ಲಿ ಎಷ್ಟೇ ಪ್ರಭಾವಿಗಳು ಷಾಮೀಲಾಗಿದ್ದರೂ ಅವರನ್ನು ಕಾನೂನಿನ ಕೈಗಳಿಗೆ ಒಪ್ಪಿಸಲಾಗುವುದು. ನೊಂದವರ ಕಣ್ಣೀರು ಒರೆಸುವ ಜೊತೆಗೆ ಅವರ ನ್ಯಾಯದ ಹೋರಾಟದಲ್ಲಿ ನಮ್ಮ ಸರ್ಕಾರ ಜೊತೆ ನಿಲ್ಲಲಿದೆ ಎಂಬ ವಾಗ್ದಾನವನ್ನು ರಾಹುಲ್‌ ಗಾಂದಿ ಅವರು ಸೇರಿದಂತೆ ನಾಡಿನ ಪ್ರತಿಯೊಬ್ಬರಿಗೂ ನೀಡುತ್ತಿದ್ದೇನೆ. ಸತ್ಯಮೇವ ಜಯತೇ.. ಎಂದಿದ್ದಾರೆ.

Previous articleಗುರು ವಿರಕ್ತ ಸಾಧು ಸನ್ಯಾಸಿಗಳ ಚಿಂತನ ಮಂಥನ ಸಭೆಗೆ ತಡೆ: ದಿಂಗಾಲೇಶ್ವರಶ್ರೀ ನೇತೃತ್ವದಲ್ಲಿ ಪ್ರತಿಭಟನೆ
Next articleಪೆನ್ ಡ್ರೈವ್ ಪ್ರಕರಣ: ಬ್ಲೂಕಾರ್ನರ್ ನೋಟಿಸ್ ಸಾಧ್ಯತೆ