2026ರಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆ ಮುಂಚಿತವಾಗಿ ಇಂದು ರಾಜಕೀಯ ಪಕ್ಷದ ಬಾವುಟ ಹಾಗೂ ಚಿಹ್ನೆಯನ್ನು ಬಿಡುಗಡೆ ಮಾಡಿದ್ದಾರೆ.
ನಟ ವಿಜಯ್ ಮುಂಬರುವ ತಮಿಳುನಾಡು ವಿಧಾನಸಭಾ ಚುನಾವಣೆಗೆ ಸಿದ್ಧತೆ ಆರಂಭಿಸಿದ್ದಾರೆ. ಅದರ ಭಾಗವಾಗಿ ಇಂದು ಪಕ್ಷದ ಚಿಹ್ನೆಯನ್ನು ಬಿಡುಗಡೆ ಮಾಡಿದರು.
2026ರಲ್ಲಿ ನಡೆಯಲಿರುವ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಬಹುದು ಎಂದು ಹೇಳಲಾಗುತ್ತಿದ್ದು ಇಂದು ದಳಪತಿ ವಿಜಯ್ ತಮ್ಮ ರಾಜಕೀಯ ಪಕ್ಷದ ಬಾವುಟ ಹಾಗೂ ಚಿಹ್ನೆಯನ್ನು ಬಿಡುಗಡೆ ಮಾಡಿದ್ದಾರೆ.
ಈ ವರ್ಷದ ಫೆಬ್ರವರಿಯಲ್ಲಿ ನಟ ದಳಪತಿ ವಿಜಯ್ ಅವರು ರಾಜಕೀಯ ಪಕ್ಷವನ್ನು ಪ್ರಾರಂಭಿಸುವುದಾಗಿ ಘೋಷಿಸಿದ್ದರು. ಇದರೊಂದಿಗೆ 2026ರಲ್ಲಿ ನಡೆಯಲಿರುವ ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿಯೂ ವಿಜಯ್ ಹೇಳಿದ್ದರು.