ಹುಬ್ಬಳ್ಳಿ: ಕುಡಿದ ಮತ್ತಿನಲ್ಲಿ ಹೆಂಡತಿ ಮತ್ತು ಮೂವರು ಮಕ್ಕಳ ಮೇಲೆ ಮಾರಕಾಸ್ತ್ರಗಳಿಂದ ಭೀಕರವಾಗಿ ಹಲ್ಲೆ ನಡೆಸಿ, ತಾನು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಸುಳ್ಳ ಗ್ರಾಮದಲ್ಲಿ ಬುಧವಾರ ಬೆಳಗಿನ ಜಾವ ನಡೆದಿದೆ.
ಸುಳ್ಳ ಗ್ರಾಮದ ಪಕ್ಕೀರಪ್ಪ ಎಂಬಾತ ಹಲ್ಲೆ ನಡೆಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಬುಧವಾರ ಬೆಳಗಿನ ಜಾವ ಮಾರಕಾಸ್ತ್ರದಿಂದ ಹೆಂಡತಿ ಮುದಕವ್ವ ಮತ್ತು ಮೂರು ಮಕ್ಕಳ ಮೇಲೆ ಕೂಡ ಮಾರಕಾಸ್ತ್ರದಿಂದ ಹಲ್ಲೆ ನಡೆಸಿದ್ದಾನೆ ಎನ್ನಲಾಗಿದೆ.
ಮಕ್ಕಳು ಹಾಗೂ ಹೆಂಡತಿ ಗಂಭೀರವಾಗಿ ಗಾಯಗೊಂಡಿದ್ದು, ಕಿಮ್ಸ್ ಗೆ ದಾಖಲಿಸಲಾಗಿದೆ. ಫಕ್ಕೀರಪ್ಪ ಮನೆಯಲ್ಲಿಯೇ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸ್ಥಳಕ್ಕೆ ಹುಬ್ಬಳ್ಳಿ ಗ್ರಾಮೀಣ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.