ಪೊಲೀಸ್ ಅಧಿಕಾರಿ ಹೆಸರಿನಲ್ಲಿ ನಕಲಿ ಖಾತೆ ತೆರೆದು ವಂಚನೆ

0
16

ಬೆಳಗಾವಿ : ಪೊಲೀಸ್ ಇನ್ಸ್ ಪೆಕ್ಟರ್ ಹೆಸರಿನ ನಕಲಿ ಫೇಸ್ ಬುಕ್ ಖಾತೆ ಸೃಷ್ಟಿಸಿದ್ದು, ಅವರ ಪೋಟೋ ಬಳಸಿ ವಾಟ್ಸಪ್ ಮೂಲಕ ಸಾರ್ವಜನಿಕರಿಂದ ಹಣ ಪಡೆದು ಮೋಸ ಮಾಡಲು ಯತ್ನಿಸಿದ ಘಟನೆ ಬೆಳಕಿಗೆ ಬಂದಿದೆ.
ಸವದತ್ತಿ ತಾಲೂಕಿನ ಮುರಗೋಡ ಪೊಲೀಸ್ ಠಾಣೆ ಇನ್ಸ್‌ಕ್ಟರ್ ಮೌನೀಶ್ವರ ಮಾಲಿ ಪಾಟೀಲ್ ಅವರ ಹೆಸರಿನ ನಕಲಿ ಫೇಸ್‌ಬುಕ್ ಅಕೌಂಟ್ ಜೊತೆಗೆ ಇವರ ಪೊಲೀಸ್ ಸಮವಸ್ತ್ರ ಧರಿಸಿದ್ದ ಭಾವಚಿತ್ರವನ್ನು ವಾಟ್ಸಪ್ ಡಿಪಿಯಾಗಿಟ್ಟು ಯಾಮಾರಿಸಿ ಜನರಿಂದ ಹಣ ಪಡೆಯಲು ಯತ್ನಿಸಿದ ಪ್ರಕರಣ ಬೆಳಕಿಗೆ ಬಂದಿದ್ದು, ಈ ಬಗ್ಗೆ ಮುರಗೋಡು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Previous articleಯಮಸಲ್ಲೇಖನ ವ್ರತದಲ್ಲಿದ್ದ ಧೈರ್ಯಮತಿ ಮಾತಾಜಿ ಜಿನೈಕ್ಯ
Next articleಸಹನಶೀಲತೆ ಉತ್ತಮ ಬದುಕಿಗೆ ಬೆಳಕು