ಮಂಗಳೂರ: ಕುಡುಪು ಬಳಿ ನಡೆದಂತಹ ದುರ್ಘಟನೆಗೆ ಸಂಬಂಧಿಸಿದಂತೆ ಆಡಳಿತ ಪಕ್ಷ ಕಾಂಗ್ರೆಸ್ ರಾಜಕೀಯ ಪ್ರೇರಿತವಾಗಿ ಅಮಾಯಕ ಹಿಂದೂ ಯುವಕರನ್ನು ಬಲಿಪಶು ಮಾಡುವ ಷಡ್ಯಂತ್ರ ನಡೆಸುತ್ತಿದೆ ಎಂದು ಶಾಸಕ ವೇದವ್ಯಾಸ ಕಾಮತ್‌ರವರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
ಸ್ಥಳೀಯ ಕಾಂಗ್ರೆಸ್ ಹಾಗೂ ಅದೇ ಮನಸ್ಥಿತಿಯ ಇನ್ನಿತರರು ಪೊಲೀಸ್ ಇಲಾಖೆಯ ಮೇಲೆ ಒತ್ತಡ ಹೇರುವ ಮೂಲಕ ಅಮಾಯಕ ಹಿಂದೂಗಳನ್ನು ಈ ಪ್ರಕರಣದಲ್ಲಿ ಸಿಲುಕಿಸಲು ನೋಡುತ್ತಿದ್ದು, ಪೊಲೀಸ್ ಇಲಾಖೆ ಆಡಳಿತ ಪಕ್ಷದ ಏಜೆಂಟ್ ರೀತಿ ವರ್ತಿಸಬಾರದೆಂದು ಆಗ್ರಹಿಸಿದರು.
ಘಟನೆಗೆ ಸಂಬಂಧಿಸಿ ನ್ಯಾಯಯುತ ತನಿಖೆ ನಡೆಯಲಿ. ಆದರೆ ತನಿಖೆ ನೆಪದಲ್ಲಿ ಹಿಂದೂ ಯುವಕರಿಗೆ ಕಿರುಕುಳ ನೀಡುವುದು, ಬೆದರಿಕೆ ಹಾಕುವುದು ಮಾಡಿದರೆ ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ ಎಂದು ಶಾಸಕರು ಎಚ್ಚರಿಕೆ ನೀಡಿದರು.