ಪೋಕ್ಸೋ ಪ್ರಕರಣ​: ಬಿಎಸ್ ಯಡಿಯೂರಪ್ಪಗೆ ತಾತ್ಕಾಲಿಕ ರಿಲೀಫ್

0
29

ಬಿಎಸ್ ಯಡಿಯೂರಪ್ಪಗೆ ನಿರೀಕ್ಷಣಾ ಜಾಮೀನು, ಪೋಕ್ಸೊ ಕೇಸ್ ರದ್ದತಿ ಇಲ್ಲ ಎಂದ ಕರ್ನಾಟಕ ಹೈಕೋರ್ಟ್‌

ಬೆಂಗಳೂರು: ಪೋಕ್ಸೊ ಪ್ರಕರಣದಲ್ಲಿ ಬಿ ಎಸ್‌ ಯಡಿಯೂರಪ್ಪ ಅವರಿಗೆ ಹೈಕೋರ್ಟ್‌ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.
ಪೋಕ್ಸೊ ಕಾಯ್ದೆಯಡಿ ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣ ರದ್ದು ಕೋರಿ ಯಡಿಯೂರಪ್ಪ ಸಲ್ಲಿಸಿರುವ ಅರ್ಜಿ ಕುರಿತು ವಿಚಾರಣೆ ನಡೆಸಿ ಜ. 17ರಂದು ಕಾದಿರಿಸಿದ್ದ ತೀರ್ಪನ್ನು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಇಂದು ತನ್ನ ತೀರ್ಪು ಪ್ರಕಟಿಸಿದೆ. ಯಡಿಯೂರಪ್ಪ ಅವರಿಗೆ ನಿರೀಕ್ಷಣಾ ಜಾಮೀನು ನೀಡಿರುವ ಹೈಕೋರ್ಟ್, ಕೇಸ್ ರದ್ದತಿಗೆ ನಿರಾಕರಿಸಿದೆ. ಹೀಗಾಗಿ ಯಡಿಯುರಪ್ಪ ಅವರಿಗೆ ಇದು ತಾತ್ಕಾಲಿಕ ರೀಲಿಪ್‌ ಆಗಿದೆ. ಬೆಂಗಳೂರಿನ ಸದಾಶಿವನಗರ ಠಾಣೆಯಲ್ಲಿ ದಾಖಲಾಗಿರುವ ಕೇಸ್ ರದ್ದುಪಡಿಸುವಂತೆ ಯಡಿಯೂರಪ್ಪ ಸಲ್ಲಿಸಿರುವ ಅರ್ಜಿ ಕುರಿತ ವಿಚಾರಣೆಯನ್ನು ಜ.17ರಂದು ಪೂರ್ಣಗೊಳಿಸಿದ್ದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ನ್ಯಾಯಪೀಠ ಶುಕ್ರವಾರಕ್ಕೆ (ಫೆ 7) ತೀರ್ಪು ಕಾಯ್ದಿರಿಸಿತ್ತು. ಪ್ರಕರಣದ ಕುರಿತು ಸದಾಶಿವನಗರ ಠಾಣಾ ಪೊಲೀಸರು 2024ರ ಮಾ.14ರಂದು ಯಡಿಯೂರಪ್ಪ ವಿರುದ್ಧ ಎಫ್‌ಐಆ‌ರ್ ದಾಖಲಿಸಿದ್ದರು. ಅದನ್ನು ರದ್ದುಪಡಿಸಲು ಕೋರಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು 2024ರ ಜೂ. 13ರಂದು ಕರ್ನಾಟಕ ಹೈಕೊರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಆ ಅರ್ಜಿಯನ್ನು ಜೂ. 14ರಂದು ವಿಚಾರಣೆ ನಡೆಸಿದ ಹೈಕೋರ್ಟ್, ಪ್ರಕರಣದ ತನಿಖೆಗೆ ತಡೆ ನೀಡಲು ನಿರಾಕರಿಸಿತ್ತು. ಆದಾಗ್ಯೂ, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಬಂಧಿಸದಂತೆ ಸಿಐಡಿ ತನಿಖಾಧಿಕಾರಿಗಳಿಗೆ ಸೂಚಿಸಿತ್ತು.

Previous article5 ವರ್ಷದ ಬಳಿಕ ರೆಪೋ ದರ ಕಡಿತ ಮಾಡಿದ RBI
Next articleಹೆದ್ದಾರಿಯಲ್ಲಿ ದರೋಡೆಗೆ ಹೊಂಚು ಹಾಕುತ್ತಿದ್ದ ಆರೋಪಿಗಳ ಬಂಧನ