ಚಿಕ್ಕಮಗಳೂರು: ಪೋಕ್ಸೋ ಪ್ರಕರಣದ ಆರೋಪಿಗೆ 7 ವರ್ಷ ಜೈಲುಶಿಕ್ಷೆ, 27 ಸಾವಿರ ರೂ. ದಂಡ ಹಾಗೂ ಪ್ರಕರಣದಲ್ಲಿ ನೊಂದ ಸಂತ್ರಸ್ಥೆಗೆ 1 ಲಕ್ಷ ರೂ. ಪರಿಹಾರ ನೀಡುವಂತೆ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆದೇಶಿಸಿದೆ.
ತರೀಕೆರೆ ತಾಲ್ಲೂಕು ಲಿಂಗದಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ನಂದಿ ಹೊಸಳ್ಳಿ ಗ್ರಾಮದ ಮಂಜಪ್ಪ ಎಂಬಾತ ಅಪ್ರಾಪ್ತ ಬಾಲಕಿ ಜೊತೆ ದೈಹಿಕ ಸಂಪರ್ಕ ಬೆಳೆಸಿ, ಕಿರುಕುಳ ನೀಡಿರುವ ಸಂಬಂಧ ಲಿಂಗದಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ತರೀಕೆರೆ ಪೊಲೀಸ್ ವೃತ್ತ ನಿರೀಕ್ಷಕ ಗಿರೀಶ್ ಪ್ರಕರಣದ ತನಿಖೆ ನಡೆಸಿದ ದೋಷರೋಪ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು. ಮಂಜಪ್ಪ ಅವರ ಮೇಲಿನ ಆರೋಪ ಸಾಭೀತಾದ ಹಿನ್ನಲೆಯಲ್ಲಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವೂ ಆರೋಪಿಗೆ 7 ವರ್ಷ ಜೈಲುಶಿಕ್ಷೆ, 27 ಸಾವಿರ ರೂ. ದಂಡ ಮತ್ತು ಸಂತ್ರಸ್ಥ ಬಾಲಕಿಗೆ 1 ಲಕ್ಷ ರೂ. ಪರಿಹಾರ ಧನ ನೀಡುವಂತೆ ಆದೇಶ ಹೊರಡಿಸಿದ್ದಾರೆ. ಸರ್ಕಾರಿ ಅಭಿಯೋಜಕ ಭರತ್‌ಕುಮಾರ್ ವಾದ ಮಂಡಿಸಿದ್ದರು.