Home Advertisement
Home ನಮ್ಮ ಜಿಲ್ಲೆ ಪ್ರಗತಿ ಪ್ರತಿಮೆ ಅಭಿವೃದ್ಧಿಗೆ ಪ್ರೇರಣೆ: ಸಿಎಂ

ಪ್ರಗತಿ ಪ್ರತಿಮೆ ಅಭಿವೃದ್ಧಿಗೆ ಪ್ರೇರಣೆ: ಸಿಎಂ

0
110
CM

ಬೆಂಗಳೂರು : ನಮ್ಮ ಹೆಮ್ಮೆಯ ನಾಡಪ್ರಭುಗಳ ಹೆಸರಿನಲ್ಲಿರುವ ವಿಮಾನ ನಿಲ್ದಾಣದಲ್ಲಿ 108 ಅಡಿ ಎತ್ತರದ ಪ್ರಗತಿ ಪ್ರತಿಮೆ ಅಭಿವೃದ್ಧಿಗೆ ಪ್ರೇರಣೆಯಾಗುವ ದೃಷ್ಟಿಯಿಂದ ನಿರ್ಮಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ಕೆಂಪೇಗೌಡರ ಕಂಚಿನ ಪ್ರತಿಮೆ ಲೋಕಾರ್ಪಣೆ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ಸಾರ್ವಜನಿಕ ಸಭಾ ವೇದಿಕೆ ಕಾರ್ಯಕ್ರಮದ ಸಿದ್ಧತೆ ಮತ್ತು ವ್ಯವಸ್ಥೆಗಳ ಪರಿಶೀಲನೆ ನಡೆಸಿದ ನಂತರ ಮಾಧ್ಯಮದವರೊಂದಿದೆ ಮಾತನಾಡಿದರು. ಕೆಂಪೇಗೌಡರ ಪ್ರಗತಿ ಪ್ರತಿಮೆಯನ್ನು ನಿರ್ಮಿಸಿದವರು ರಾಮ್ ಸುತಾರಾ. ಇಡೀ ಭಾರತದಲ್ಲಿ ಅತ್ಯಂತ ಶ್ರೇಷ್ಠ ಶಿಲ್ಪಿ. ಅಹಮದಾಬಾದ್‍ನಲ್ಲಿರುವ ವಲ್ಲಭಭಾಯಿ ಪಟೇಲ್ ಅವರ ಐಕ್ಯತಾ ಮೂರ್ತಿಯನ್ನೂ ಹಾಗೂ ಅಂಬೇಡ್ಕರ್ ಅವರ ಅತಿ ಎತ್ತರದ ಮೂರ್ತಿಯನ್ನು ನಿರ್ಮಿಸಿದ ಖ್ಯಾತಿ ಅವರದ್ದು. ನಾಳೆ ಪ್ರಧಾನಿಮಂತ್ರಿಗಳು ಅವರಿಗೆ ಅಭಿನಂದನೆ ಸಲ್ಲಿಸಲಿದ್ದಾರೆ. ಅವರ ಕೈಚಳಕದಿಂದ ಇಷ್ಟು ಬೃಹತ್ ಮೂರ್ತಿ ಮೈದಳೆದಿದೆ. ಸಮಸ್ತ ಕನ್ನಡ ನಾಡಿನ ಜನತೆಯ ಪರವಾಗಿ ಅವರಿಗೆ ಅಭಿನಂದನೆಗಳನ್ನು ಸಲ್ಲಿಸುವುದಾಗಿ ಹೇಳಿದರು.